ರೇಪ್ ಆ್ಯಂಡ್ ಮರ್ಡರ್-ಬಾಲಕಿಯ ನಾಲಿಗೆ ಕತ್ತರಿಸಿ, ಕತ್ತು ಹಿಸುಕಿ ಬರ್ಬರ ಕೊಲೆ

-ಕಬ್ಬಿನ ಗದ್ದೆಯಲ್ಲಿ ಪೋರಿಯ ಶವ ಪತ್ತೆ

ಲಕ್ನೋ: ಉತ್ತರ ಪ್ರದೇಶದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ. ಲಖಿಮಪುರ ಖೀರಿ ಜಿಲ್ಲೆಯಲ್ಲಿ 13 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿದೆ. ಬಾಲಕಿಯ ಶವ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ. ಪ್ರಕರಣ ಸಂಬಂಧ ಪೊಲೀಸರು ಗ್ರಾಮದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಮಗಳ ಕುತ್ತಿಗೆಯ ಕೊಯ್ದು ಕೊಲೆ ಮಾಡಲಾಗಿದೆ. ಆಕೆಯ ಕಣ್ಣುಗಳು ಹೊರಗಡೆ ಬಂದಿದ್ದವು, ನಾಲಿಗೆ ಕತ್ತರಿಸಲಾಗಿತ್ತು ಎಂದು ಬಾಲಕಿಯ ತಂದೆ ಹೇಳಿದ್ದಾರೆ. ನೇಪಾಳದ ಗಡಿ ಭಾಗದಲ್ಲಿರುವ, ರಾಜಧಾನಿ ಲಕ್ನೋನಿಂದ 300 ಕಿಲೋ ಮೀಟರ್ ದೂರದಲ್ಲಿರುವ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರ ಘಟನೆ ನಡೆದಿದ್ದು, ಬಾಲಕಿಯ ಶವ ಆರೋಪಿಗಳ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ.

ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಅತ್ಯಾಚಾರ ನಡೆದಿರೋದು ದೃಢವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಇಬ್ಬರನ್ನು ಬಂಧಿಸಲಾಗಿದೆ. ಕೊಲೆ, ಅತ್ಯಾಚಾರ ಸೇರಿದಂತೆ ಹಲವು ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ – ಮನೆಗೆ ನುಗ್ಗಿ ಅಪ್ರಾಪ್ತೆ ಮೇಲೆ ರೇಪ್

ಶುಕ್ರವಾರ ಮಧ್ಯಾಹ್ನದಿಂದ ಮಗಳು ಕಾಣೆಯಾಗಿ ದ್ದಳು. ಗ್ರಾಮದ ತುಂಬೆಲ್ಲ ಮಗಳನ್ನು ಹುಡುಕಾಡಿದೆ. ಸಂಜೆ ವೇಳೆ ಕಬ್ಬಿನ ಗದ್ದೆಯಲ್ಲಿ ಪುತ್ರಿ ಶವ ಸಿಕ್ಕಿತು. ಆಕೆಯ ನಾಲಿಗೆಯನ್ನು ಕತ್ತರಿಸಿ, ದುಪ್ಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು ಎಂದು ಬಾಲಕಿಯ ತಂದೆ ಹೇಳಿದ್ದಾರೆ. ಇದನ್ನೂ ಓದಿ: ಶೂಟಿಂಗ್‍ಗೆ ಬಂದ ಯುವತಿಯ ಮೇಲೆ ಆತ್ಯಾಚಾರ

ಕಳೆದ ವಾರ ಉತ್ತರ ಪ್ರದೇಶದ ಹಾಪುಡದಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಾಲಕಿಗೆ ಮೀರತ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.

Comments

Leave a Reply

Your email address will not be published. Required fields are marked *