ವಿಜಯಪುರ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲಿಸಿ ವಿಜಯಪುರದಲ್ಲಿ ಪ್ರಗತಿಪರ ಸಂಘಟನೆಗಳು ‘ರೈಲು ರೋಕೋ’ಗೆ ಇಂದು ಮುಂದಾಗಿದ್ದರು.
ಈ ವೇಳೆ ರೈಲ್ವೆ ಪೊಲೀಸರು ‘ರೈಲು ರೋಕೋ’ ಚಳುವಳಿಗೆ ಅಡ್ಡಿಪಡಿಸಿದ್ದಾರೆ. ಇದರಿಂದ ಕೇಂದ್ರ ರೈಲ್ವೆ ನಿಲ್ದಾಣದ ಎದುರೇ ಪ್ರತಿಭಟನೆಗೆ ಸಂಘಟನೆಗಳು ಮುಂದಾದವು.

ರೈಲ್ವೆ ನಿಲ್ದಾಣದ ಎದುರು ರೈತ ಗೀತೆ ಹಾಡುವುದರ ಮೂಲಕ ಹೋರಾಟಗಾರು ಪ್ರತಿಭಟನೆ ಮಾಡಿದರು. ಅಲ್ಲದೆ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಸದ್ಯ ಸ್ಥಳದಲ್ಲಿ ಒಂದು ಡಿಎಆರ್ ತುಕಡಿ, ಓರ್ವ ಸಿಪಿಐ, ಮೂವರು ಪಿಎಸ್‍ಐ ಹಾಗೂ ಮೂವತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

Leave a Reply