ಲಸಿಕೆಗಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ: ಬಾಲಕೃಷ್ಣ

ಹಾಸನ: ಕೊರೊನಾ ಲಸಿಕೆಗಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ಎದುರಾಗಿದೆ ಎಂದು ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಕಿಡಿಕಾರಿದ್ದಾರೆ.

ಜಿಲ್ಲೆಯ ಚನ್ನರಾಯಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಕ್ಸಿನೇಷನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲಸಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ನಮ್ಮ ತಾಲೂಕಿಗೆ ಎಪ್ಪತ್ತು ಸಾವಿರ ಡೋಸ್ ವ್ಯಾಕ್ಸಿನ್ ಬಂದಿದೆ. ಇನ್ನೂ ಹೆಚ್ಚಿನ ಲಸಿಕೆಯ ಅಗತ್ಯವಿದೆ ಎಂದು ಹೇಳಿದರು.

ಈ ಕುರಿತು ಮನವಿ ಮಾಡಿದರೂ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ನೀಡುತ್ತಿಲ್ಲ. ತಾಲೂಕಿಗೆ ಲಸಿಕೆಗೋಸ್ಕರ ಭಿಕ್ಷೆ ಬೇಡುವಂತಹ ಸಂದರ್ಭ ಉಂಟಾಗಿದೆ. ತಾಲೂಕಿನ ಜನತೆಗೆ ಏನು ಹೇಳಬೇಕು ಎಂಬುದು ನಮಗೆ ತಿಳಿಯುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

Comments

Leave a Reply

Your email address will not be published. Required fields are marked *