ಲಾಕ್‍ಡೌನ್ ಪ್ರಶ್ನೆಯೇ ಇಲ್ಲ, ಆರ್ಥಿಕ ಸ್ಥಿತಿ ಸರಿ ಇಲ್ಲ: ಬಿಎಸ್‍ವೈ

ಬೆಂಗಳೂರು: ಲಾಕ್‍ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಯಾಕಂದ್ರೆ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಕೊರೊನಾ ಸ್ಫೋಟವೇ ಆಗ್ತಿದೆ. ಹೀಗಾಗಿ ಸಿಎಂ ಇಂದು ಸಿಎಂ ಅವರು ಶಾಸಕರ ಜೊತೆ ಸಭೆಗಳ ಮೇಲೆ ಸಭೆ ನಡೆಸಲಿದ್ದಾರೆ. ಇದಕ್ಕೂ ಮೊದಲು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‍ವೈ, ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ವಪಕ್ಷ ಶಾಸಕರ ಸಭೆ ಕರೆದಿದ್ದೇನೆ. ಅವರ ಜೊತೆ ಚರ್ಚೆ ಮಾಡುತ್ತೇವೆ. ಅವರ ವಿಧಾನದಸಭಾ ಕ್ಷೇತ್ರಗಳಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಲಾಕ್ ಡೌನ್ ಪ್ರಶ್ನೆಯೇ ಇಲ್ಲ. ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಈಗ ಆರ್ಥಿಕ ಪರಿಸ್ಥಿತಿ ಸಧಾರಿಸುತ್ತಿದೆ. ಹೀಗಾಗಿ ಬೆಂಗಳೂರು ಲಾಕ್‍ಡೌನ್ ಪ್ರಸ್ತಾಪ ಇಲ್ಲ. ವಿಪಕ್ಷಗಳ ಸಲಹೆಯನ್ನ ಗಂಭೀರವಾಗಿ ಪರಿಗಣಿಸಿ ಮುಂದುವರಿಯುತ್ತೇವೆ ಎಂದು ಹೇಳಿದರು.

ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಚಿವ ಅಶೋಕ್ ಕೂಡ ಲಾಕ್ ಡೌನ್ ಮಾಡುವ ಪ್ರಸ್ತಾಪ ಇಲ್ಲ ಎಂದು ಹೇಳಿದ್ದರು. ಇತ್ತ ಲಾಕ್‍ಡೌನ್ ಬೇಕು ಎಂದು ಕೆಲ ಕಾಂಗ್ರೆಸ್, ಜೆಡಿಎಸ್ ಶಾಸಕರು ಒತ್ತಾಯಿಸಿದ್ದಾರೆ. ಅಗತ್ಯ ಇರುವ ಕಡೆ ಲಾಕ್‍ಡೌನ್ ಇರಲಿ ಎಂದು ಕೆಲ ಬಿಜೆಪಿ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಲ್ಲರ ಅಭಿಪ್ರಾಯಗಳನ್ನ ಸಂಗ್ರಹಿಸಿ ಜುಲೈ 4ರ ಬಳಿಕ ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಯಾಕಂದ್ರೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಗಿಯೋವರೆಗೆ ಲಾಕ್‍ಡೌನ್ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿಯೇ ಮುಖ್ಯಮಂತ್ರಿಗಳು ಪ್ಲಾನ್ ರೆಡಿ ಮಾಡ್ತಿದ್ದಾರೆ ಅಂತ ತಿಳಿದುಬಂದಿದೆ.

Comments

Leave a Reply

Your email address will not be published. Required fields are marked *