ವಾರ್ಡ್ ಬಾಯ್ ಸಾವು – ಲಸಿಕೆಯಿಂದ್ಲೇ ಮೃತಪಟ್ಟಿರೋದಾಗಿ ಕುಟುಂಬ ಆರೋಪ

ಲಕ್ನೋ: ಕೊರೊನಾ ಲಸಿಕೆಯನ್ನು ತೆಗೆದುಕೊಂಡ 24 ಗಂಟೆಗಳಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಮೃತವ್ಯಕ್ತಿಯನ್ನು ಮಹಿಪಾಲ್ ಸಿಂಗ್ (40) ಎಂದು ಗುರುತಿಸಲಾಗಿದೆ. ಈತ ಮೊರೊದಾಬಾದ್‍ನ ಜಿಲ್ಲಾ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದನು. ಕೋವಿಶೀಲ್ಡ್ ಕೊರೊನಾ ಲಸಿಕೆಯನ್ನು ಪಡೆದ 24 ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ.

ಮಹಿಪಾಲ್ ಸಿಂಗ್ ಶನಿವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿತ್ತು. ಅದೇ ದಿನ ಕೆಲಗಂಟೆಗಳ ನಂತರ ಈತ ಉಸಿರಾಟದ ತೊಂದರೆ ಮತ್ತು ಎದೆ ನೋವಿನಿಂದ ಬಳಲುತ್ತಿದ್ದನು ಎಂದು ಆಸ್ಪತ್ರೆಗೆ ದಾಖಲಿಸಿದ ವೇಳೆ ಮೃತಪಟ್ಟಿದ್ದಾನೆ. ಆತ ರಾತ್ರಿ ಶಿಫ್ಟ್‍ನಲ್ಲಿ ಕೆಲಸವನ್ನು ಮಾಡುತ್ತಿದ್ದನು. ಆದರೆ ಮಹಿಪಾಲ್ ಸಿಂಗ್ ಸಾವಿನ ಕುರಿತಾಗಿ ಇನ್ನೂ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆಯಿಂದ ತಿಳಿದು ಬರಬೇಕಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಹಿಪಾಲ್ ಸಿಂಗ್ ಕೋವಿಶೀಲ್ಡ್ ಲಸಿಕೆ ಹಾಕಲಾಗಿತ್ತು. ಮರುದಿನ ಅಂದರೆ ಜನವರಿ 17 ರಂದು ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ನಾವು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿದ್ದೆವು ಆದರಂತೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಲಸಿಕೆ ಹಾಕಿದ ನಂತರ ಅವರ ಆರೋಗ್ಯ ಹದಗೆಟ್ಟು ಮೃತಪಟ್ಟಿದ್ದಾರೆ ಎಂದು ಕುಟುಂಬ ಆರೋಪಿಸುತ್ತಿದೆ.

Comments

Leave a Reply

Your email address will not be published. Required fields are marked *