ಶಾಸಕರಾಗಲಿ, ಯಾರೇ ಆಗಲಿ ಅವರ ಮೇಲೆ ದಾಳಿ ಮಾಡ್ಬಾರ್ದು- ಗಲಭೆಗೆ ಡಿಕೆಶಿ ಖಂಡನೆ

ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಕೃತ್ಯವನ್ನು ಖಂಡಿಸುತ್ತೇನೆ. ಯಾರೂ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಕೂಡ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಮಾಡಬಾರದು. ನಿನ್ನೆ ನಡೆದ ಘಟನೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ. ಶಾಸಕರಾಗಲಿ, ಯಾರೇ ಆಗಲಿ ಅವರ ಮೇಲೆ ದಾಳಿ ಮಾಡಬಾರದು. ಪೊಲೀಸ್ ಠಾಣೆಯ ಆಸ್ತಿ- ಪಾಸ್ತಿಗೆ ಮಾಡಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ದುಷ್ಕರ್ಮಿಗಳ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆ – ಭಯದಿಂದ ಬಾತ್‍ರೂಮಿನಲ್ಲಿ 3 ಗಂಟೆ ಬಚ್ಚಿಟ್ಟುಕೊಂಡಿದ್ದ ಕುಟುಂಬ

ಪ್ರಚೋದನಕಾರಿ ಪೋಸ್ಟ್ ಕೂಡ ಸರಿಯಲ್ಲ. ಅದು ಕೂಡ ತಪ್ಪು. ಈ ಸಂಬಂಧ ಇಂದು ಬೆಂಗಳೂರು ಶಾಸಕರ ಸಭೆ ಕರೆದಿದ್ದೇನೆ. ಅಲ್ಲಿ ಚರ್ಚೆ ಮಾಡುತ್ತೇವೆ. ನಮ್ಮ ಶಾಸಕರು ಕೂಡ ಸ್ಥಳಕ್ಕೆ ಹೋಗಿ ಶಾಂತಿ ನೆಲಸುವಂತೆ ಪ್ರಯತ್ನ ಮಾಡಿದ್ದಾರೆ. ಆದರೆ ಯಾರೂ ಕಂಟ್ರೋಲ್‍ಗೆ ಸಿಕ್ಕಿಲ್ಲ. ಬಹಳ ವ್ಯವಸ್ಥಿತವಾದ ಸಂಚು ಇದೆ ಎಂಬುದನ್ನು ಮಾಧ್ಯಮದಲ್ಲಿ ನೋಡಿದ್ದೇನೆ ಎಂದರು.  ಇದನ್ನೂ ಓದಿ: ಕೆ.ಜಿ.ಹಳ್ಳಿ ಗಲಭೆ ಪ್ರಕರಣ – ಪೊಲೀಸರ ಗೋಲಿಬಾರ್‌ಗೆ ಮೂವರು ಬಲಿ, 110 ಮಂದಿ ಅರೆಸ್ಟ್

ಘಟನೆಯನ್ನು ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಖಂಡಿಸುತ್ತದೆ. ಈ ಸಂಬಂಧ ಸರ್ಕಾರ ಕಾನೂನು ಕ್ರಮಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳಲಿ. ನಮ್ಮದು ಯಾವುದೇ ರೀತಿಯ ಅಭ್ಯಂತರವಿಲ್ಲ. ಸಂಪೂರ್ಣ ಸಹಕಾರವನ್ನು ಸರ್ಕಾರಕ್ಕೆ ಕೊಡುವುದಾಗಿ ತಿಳಿಸಿದರು. ಇದನ್ನೂ ಓದಿ: ಕೆಜಿ ಹಳ್ಳಿ ಗಲಭೆ ಪ್ರಕರಣ – ಎಸ್‍ಡಿಪಿಐ ಮುಖಂಡ ಅರೆಸ್ಟ್

ಬಿ ಎಲ್ ಸಂತೋಷ ಏನ್ ರಾಜಕಾರಣ ಮಾಡ್ತಾರೆ ಮಾಡಲಿ. ರಾತ್ರಿಯಿಂದ ನಾನು ಮಾಹಿತಿ ಪಡೆದಿದ್ದೇನೆ. ಸಿಟಿ ರವಿ ಅಥವಾ ಇನ್ಯಾರದ್ದೋ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಗರಂ ಆದರು. ಇದನ್ನೂ ಓದಿ:  ಬೆಂಕಿ ಹಚ್ಚೋದು ನಮ್ಮ ಸಂಸ್ಕೃತಿಯಲ್ಲ, ನೆಲದ ಕಾನೂನೇ ಅಂತಿಮ: ಖಾದರ್

Comments

Leave a Reply

Your email address will not be published. Required fields are marked *