ಶಾಸಕರ ಸಭೆಗಳಿಗೂ ಸಚಿವ ಸಂಪುಟಕ್ಕೂ ಸಂಬಂಧ ಇಲ್ಲ: ಪ್ರಹ್ಲಾದ್ ಜೋಶಿ

ಧಾರವಾಡ: ಶಾಸಕರ ಸಭೆಗಳು ನಡೆಯುತ್ತೇಲೆ ಇರುತ್ತೇವೆ. ಅದಕ್ಕೂ ಸಚಿವ ಸಂಪುಟಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು, ಸಚಿವ ಸಂಪುಟ ವಿಸ್ತರಣೆ ಸಿಎಂ ಮತ್ತು ಹೈಕಮಾಂಡ್ ಗೆ ಬಿಟ್ಟ ವಿಚಾರ. ಈ ಹಿಂದೆಯೂ ಹುಬ್ಬಳ್ಳಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂಬಂಧ ಸಭೆ ಆಗಿತ್ತು. ಅದನ್ನೂ ಸಹ ರಹಸ್ಯ ಸಹ ಎಂದಿದ್ದರು. ಅದೆಲ್ಲ ಏನೂ ಇರುವುದೇ ಇಲ್ಲ ಸದ್ಯ ಆಗುತ್ತಿರುವ ಸಭೆಗಳಿಗೂ ಸಂಪುಟ ವಿಸ್ತರಣೆಗೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ ರಾಜಕೀಯ ಷಡ್ಯಂತ್ರ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಅವರು, ಕಾನೂನು ತನ್ನ ಕೆಲಸ ಮಾಡುತ್ತಿದೆ. ನಮ್ಮ ಕೈವಾಡ ಇದೆ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಆ ರೀತಿ ಆರೋಪ ಮಾಡುವವರಿಗೆ ದೇವರು ಸದ್ಬುದ್ಧಿ ನೀಡಲಿ. ಇದೇ ವೇಳೆ ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಹ್ಲಾದ್ ಜೋಶಿ, ರವಿ ಬೆಳಗೆರೆ ನಿಧನ ನಮ್ಮೆಲ್ಲರಿಗೆ ದುಃಖ ತಂದಿದೆ. ಭಗವಂತ ಅವರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದರು.

Comments

Leave a Reply

Your email address will not be published. Required fields are marked *