ಬೆಂಗಳೂರು: ಶಾಸಕ ಸತೀಶ್ ರೆಡ್ಡಿಗೆ ಸೇರಿದ ಎರಡು ಕಾರುಗಳು ಬೆಂಕಿಗಾಹುತಿಯಾಗಿದೆ.
ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಫಾರ್ಚೂನರ್ ಕಾರು ಸೇರಿದಂತೆ ಎರಡು ಕಾರುಗಳು ಬೆಂಕಿಗಾಹುತಿಯಾಗಿವೆ.

ಸತೀಶ್ ರೆಡ್ಡಿಯವರು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಬೊಮ್ಮನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿಯಲ್ಲಿನ ಖಾತೆ ಹಂಚಿಕೆ ಬಿಕ್ಕಟ್ಟು ಬಹುತೇಕ ಶಮನ

ಈ ಸಂಬಂಧ ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಶಿ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕರ ಕಾರಿಗೆ ಕಿಡಿಗೇಡಿಗಳು ಕಾರಿಗೆ ಬೆಂಕಿ ಹಾಕಿದ್ದಾರೆ. ಘಟನೆಯಲ್ಲಿ ಎರಡು ಕಾರುಗಳು ಭಸ್ಮವಾಗಿದೆ. ಈ ಕುರಿತು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯಾರು ಮಾಡಿದ್ದಾರೆ..? ಏಕೆ ಮಾಡಿದ್ದಾರೆ..? ಅನ್ನೋದ್ರ ಬಗ್ಗೆ ತನಿಖೆ ನಡೆಯುತ್ತಿದೆ. ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿದೆ. ಆರೋಪಿಗಳ ದುಷ್ಕೃತ್ಯದ ಬಗ್ಗೆ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು ಸದ್ಯದಲ್ಲೆ ಆರೋಪಿ ಗಳ ಬಂಧಿಸುವ ವಿಶ್ವಾಸ ಇದೆ ಎಂದರು.


Leave a Reply