ಶಿಲ್ಪಾ ನಾಗ್‍ರಂತಹ ದಕ್ಷ ಅಧಿಕಾರಿಗಳ ಸೇವೆ ಅಗತ್ಯ, ಸಿಎಂ ಗಮನಕ್ಕೆ ತರುತ್ತೇನೆ: ರಾಮ್‍ದಾಸ್

– ಶಿಲ್ಪಾ ನಾಗ್ ರಾಜೀನಾಮೆ ನೀಡಿರುವುದು ಆಶ್ಚರ್ಯ, ಬೇಸರ ತಂದಿದೆ

ಮೈಸೂರು: ಮಹಾನಗರ ಪಾಲಿಕೆ ಅಯುಕ್ತೆ ಶಿಲ್ಪಾ ನಾಗ್ ಮುಖ್ಯಕಾರ್ಯದರ್ಶಿ ಹುದ್ದೆಗೆ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿರುವುದಕ್ಕೆ ಶಾಸಕ ಎಸ್.ಎ.ರಾಮ್‍ದಾಸ್ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಇಂತಹ ದಕ್ಷ ಅಧಿಕಾರಿಗಳ ಸೇವೆ ಜನರಿಗೆ ನಿಜಕ್ಕೂ ಬೇಕಾಗಿದೆ. ಇಂಥವರು ಅಧಿಕಾರದಲ್ಲಿ ಮುಂದುವರಿಯಬೇಕು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಗಮನಕ್ಕೂ ತರುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರು ರಾಜೀನಾಮೆ ಕೊಟ್ಟಿದ್ದಾರೆ ಎನ್ನುವ ವಿಷಯ ಕೇಳಿ ನಿಜಕ್ಕೂ ಆಶ್ಚರ್ಯ ಹಾಗೂ ಬೇಸರವಾಯಿತು ಎಂದರು. ಇದನ್ನೂ ಓದಿ: ಮೇಡಂ ರಾಜೀನಾಮೆ ನೀಡಬೇಡಿ ಎಂದು ಶಿಲ್ಪಾ ನಾಗ್ ಕಾಲು ಹಿಡಿದ ಭದ್ರತಾ ಸಿಬ್ಬಂದಿ

ಮೈಸೂರಿನಲ್ಲಿ ಕೋವಿಡ್ ಮಿತ್ರ, ಮನೆ ಮನೆ ಸರ್ವೇ, ಟೆಲಿ ಮೆಡಿಸಿನ್ ನಂತಹ ಎಲ್ಲ ಮಹತ್ತರವಾದ ಕೋವಿಡ್ ಗೆ ಸಂಬಂಧಿಸಿದ ಯೋಜನೆಗಳನ್ನು ತಂದವರು ಇವರು. ಇಂತಹ ದಕ್ಷ ಅಧಿಕಾರಿಗಳ ಸೇವೆ ಜನರಿಗೆ ನಿಜಕ್ಕೂ ಬೇಕಾಗಿದೆ. ಇಂಥವರು ಅಧಿಕಾರದಲ್ಲಿ ಮುಂದುವರಿಯಬೇಕು ಎಂದು ತಿಳಿಸಿದ್ದೇನೆ. ಅಲ್ಲದೇ ಮುಖ್ಯಮಂತ್ರಿಗಳ ಗಮನಕ್ಕೂ ತರುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ರಾಜೀನಾಮೆ ನೀಡಿ ಕಣ್ಣೀರಿಟ್ಟ ಶಿಲ್ಪಾನಾಗ್

ಜನಪ್ರತಿನಿಧಿಗಳೊಡನೆ, ಅಧಿಕಾರಿಗಳೊಡನೆ ಚರ್ಚಿಸಿ ನಿರ್ಧಾರಗಳನ್ನು, ಯೋಜನೆಗಳನ್ನು ರೂಪಿಸುತ್ತಿದ್ದರು. ಅವರಿಗೆ ಕೆಲವು ವಿಷಯಗಳಲ್ಲಿ ಬೇಸರವಾಗಿದ್ದರಿಂದ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿರುವುದು ನಿಜಕ್ಕೂ ದುಃಖಕರ. ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಕಾರಣಕ್ಕೂ ಇವರ ರಾಜೀನಾಮೆಯನ್ನು ಅಂಗೀಕಾರ ಮಾಡಬಾರದು ಎಂದು ಮನವಿ ಮಾಡಿದ್ದಾರೆ, ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಿಎಂ ಕಾರ್ಯಾಲಯಕ್ಕೆ ಟ್ಯಾಗ್ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *