ಬೆಂಗಳೂರು: ಸಿಂಗರ್ ಮಂಗ್ಲಿ ಕಣ್ಣೇ ಅದಿರಿಂದಿ ಎನ್ನುವ ಮೂಲಕವಾಗಿ ಎಲ್ಲರ ಗಮನವನ್ನು ಸೆಳೆದಿದ್ದರು. ಹಾಡಿನಿಂದ ಮೋಡಿ ಮಾಡಿರುವ ಮಂಗ್ಲಿ ಇದೀಗ ತಮ್ಮ ನಟನೇ ಮೂಲಕವಾಗಿ ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರವಾಗಲಿದ್ದಾರೆ.

ನಟಿಯಾಗಿ ಸ್ಯಾಂಡಲ್‍ವುಡ್‍ಗೆ ಮಂಗ್ಲಿ ಕಾಲಿಡಲಿದ್ದಾರೆ. ಗಾಯಕಿ ಮಂಗ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಜೊತೆಗೆ ನಟಿಸುವ ಕುರಿತು ಮಾಹಿತಿ ಸಿಕ್ಕಿದೆ. ಆದರೆ, ಅವರು ಯಾವ ಪಾತ್ರ ಮಾಡಲಿದ್ದಾರೆ? ಪಾತ್ರದ ವಿಶೇಷತೆ ಏನು ಎಂಬುದರ ಬಗ್ಗೆ ಇನ್ನಷ್ಟೇ ಮಾಹಿತಿ ಗೊತ್ತಾಗಬೇಕಿದೆ.

ಶಿವಣ್ಣನ 124 ನೇ ಚಿತ್ರದಲ್ಲಿ ಮಂಗ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಮಂಗ್ಲಿ ಅವರ ಗಾಯನ ಜನಪ್ರಿಯತೆ ಶಿವಣ್ಣನ ಚಿತ್ರದಲ್ಲಿ ಭಾಗವಹಿಸುವ ಅವಕಾಶವನ್ನು ತಂದು ಕೊಟ್ಟಿದೆ. ಮಂಗ್ಲಿ ಹೇಗೆ ಮೋಡಿ ಮಾಡಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಚಿಕ್ಕಮಗಳೂರು, ಬೆಂಗಳೂರು, ಜಮ್ಮು ಮತ್ತು ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಕುಡಿಪುಡಿ ವಿಜಯಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಈ ಚಿತ್ರಕ್ಕೆ ರವಿಕುಮಾರ್ ಸನಾ ಅವರ ಛಾಯಾಗ್ರಹಣವಿದೆ. ಟಗರು ಖ್ಯಾತಿಯ ಚರಣ್ ರಾಜ್ ಸಂಗೀತ ನಿರ್ದೇಶನ, ದೀಪು ಎಸ್. ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ರವಿ ಸಂತೆಹಕ್ಲು ಕಲಾ ನಿರ್ದೇಶನ ಈ ಹೊಸ ಚಿತ್ರಕ್ಕಿದೆ.

Leave a Reply