ಶೀಘ್ರವೇ ಸಿನಿಮಾ ಶೂಟಿಂಗ್ ನಿಯಮಗಳಲ್ಲಿ ಬದಲಾವಣೆ: ಬೊಮ್ಮಾಯಿ

ಬೆಂಗಳೂರು: ಶೀಘ್ರವೇ ಸಿನಿಮಾ ಶೂಟಿಂಗ್ ನಿಯಮಗಳಲ್ಲಿ ಬದಲಾವಣೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ‘ಲವ್ ಯೂ ರಚ್ಚು’ ದುರಂತ ಸಂಬಂಧ ಸಿಎಂ ಪ್ರತಿಕ್ರಿಯಿಸಿದರು. ಈ ರೀತಿಯ ಹಲವಾರು ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಕೆಲವರು ನಿಯಮಗಳನ್ನು ಫಾಲೋ ಮಾಡುತ್ತಿಲ್ಲ. ಹೀಗಾಗಿ ಸಿನಿಮಾ ಶೂಟಿಂಗ್ ನಿಯಮಗಳಲ್ಲಿ ಬದಲಾವಣೆಗಳನ್ನು ತರುತ್ತೇವೆ ಎಂದರು.

ನಾಳೆ ಅಥವಾ ನಾಡಿದ್ದು ಕೆಲವು ಆದೇಶಗಳನ್ನು ಹೊರಡಿಸುತ್ತೇವೆ. ಅನುಮತಿ ತೆಗೆದುಕೊಳ್ಳಲು ಅನುಕೂಲನೂ ಆಗಬೇಕು. ಹಾಗೆಯೇ ಅನುಮತಿ ಇಲ್ಲದೆ ಶೂಟಿಂಗ್ ನಡೆಯಲು ಬಾರದು ಇಂತಹ ಆದೇಶ ಜಾರಿಗೆ ತರುವುದಾಗಿ ಸಿಎಂ ತಿಳಿಸಿದರು. ಇದನ್ನೂ ಓದಿ: ಅಮ್ಮ ನಿನ್ನ ಚೆನ್ನಾಗಿ ನೋಡ್ಕೋತ್ತೀನಿ ಅಂದ್ಬಿಟ್ಟು ರಸ್ತೆಯಲ್ಲೇ ಬಿಟ್ಟೋದ: ವಿವೇಕ್ ತಾಯಿ ಕಣ್ಣೀರು

ನಿನ್ನೆ ಬಿಡದಿ ಬಳಿಯ ತೋಟದಲ್ಲಿ ‘ಲವ್ ಯೂ ರಚ್ಚು’ ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣ ನಡೆಸುವ ಸಂದರ್ಭದಲ್ಲಿ ವಿದ್ಯುದಾಘಾತದಿಂದ ಫೈಟರ್ ವಿವೇಕ್ ಸಾವನ್ನಪ್ಪಿದ್ದರು. ಇನ್ನೊಬ್ಬ ಫೈಟರ್ ರಂಜಿತ್ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಶೂಟಿಂಗ್ ವೇಳೆ 35 ವರ್ಷದ ಫೈಟರ್ ವಿವೇಕ್ ಧರಿಸಿದ್ದ ಲೋಹದ ಹಗ್ಗ, ಹೈಟೆನ್ಶನ್ ವೈರ್ ತಗುಲಿ ಈ ದುರಂತ ಸಂಭವಿಸಿದೆ. ಗುರು ದೇಶಪಾಂಡೆ ನಿರ್ಮಾಣದ ಈ ಸಿನಿಮಾಗೆ ಫೈಟ್ ಮಾಸ್ಟರ್ ವಿನೋದ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದರು.

ಈ ಹಿಂದೆ ಅಂದರೆ 2016ರಲ್ಲಿ `ಮಾಸ್ತಿ ಗುಡಿ’ ಸಿನಿಮಾದ ವೇಳೆ ಫೈಟರ್ ಅನಿಲ್, ಉದಯ್ ಸಾವನ್ನಪ್ಪಿದ್ದರು. ಇದನ್ನೂ ಓದಿ: ಲವ್ ಯೂ ರಚ್ಚು ದುರಂತ – ಜೆಸಿಬಿ ಡ್ರೈವರ್ ಸೇರಿ ಐವರ ಮೇಲೆ FIR

Comments

Leave a Reply

Your email address will not be published. Required fields are marked *