ಬೆಂಗಳೂರು: ನನ್ನನ್ನು ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆಂದು ವಿನಂತಿಸುವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮನವಿ ಮಾಡಿದ್ದಾರೆ.
ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜು ಆಲಿಯಾಸ್ ರಾಜಣ್ಣ ಬಂಧನ ವಿಚಾರಕ್ಕೆ ಟ್ವಿಟ್ಟರ್ ನಲ್ಲಿ ವಿಜಯೇಂದ್ರ ಮೊದಲ ಪ್ರತಿಕ್ರಿಯಿಸಿದ್ದಾರೆ.
ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ.
ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆಂದು ವಿನಂತಿಸುವೆ. 🙏 (2/2)
— Vijayendra Yediyurappa (@BYVijayendra) July 2, 2021
ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸಚಿವ ರಾಮುಲು ಮನೆಯಲ್ಲೇ ಪಿಎ ರಾಜಣ್ಣ ಅರೆಸ್ಟ್

ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Leave a Reply