ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಗದಗ ಜಿಮ್ಸ್ ಗೆ ಆಕ್ಸಿಜನ್ ಪೂರೈಕೆ

ಗದಗ: ಕೊರೊನಾ ಸಂಕಷ್ಟದಲ್ಲಿ ಸೋಂಕಿತರ ಚಿಕಿತ್ಸೆಗೆ ಅನುಕೂಲಕ್ಕಾಗಿ ಶ್ರೀಧರ್ಮಸ್ಥಳದಿಂದ ನಗರದ ಜಿಮ್ಸ್ ಆಸ್ಪತ್ರೆಗೆ 2 ಟನ್ ಆಕ್ಸಿಜನ್ ಪೂರೈಸಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಶಿವಾನಂದ್ ಆಚಾರ್ಯ ಅವರು ಜಿಮ್ಸ್ ಆಸ್ಪತ್ರೆಗೆ ವಿತರಿಸಿದರು.

ಜಿಲ್ಲಾ ನಿರ್ದೇಶಕ ಶಿವಾನಂದ್ ಆಚಾರ್ಯ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಜಿಲ್ಲೆಯ ಕೋವಿಡ್ ರೋಗಿಗಳಿಗೆ ಉಚಿತ ವಾಹನ ವ್ಯವಸ್ಥೆ ಮಾಡಲಾಗಿದೆ. 420 ಜನ ಇದರ ಪ್ರಯೋಜನ ಪಡೆದಿದ್ದಾರೆ. ಜಿಲ್ಲೆಯಾದ್ಯಂತ ಇತ್ತೀಚಿಗೆ 481 ಕುಟುಂಬಕ್ಕೆ ಆಹಾರ ಧಾನ್ಯಗಳನ್ನು ಕಿಟ್ ವಿತರಣೆ ಮಾಡಲಾಗಿದೆ. ಇನ್ನೂ 620 ಕಿಟ್‍ಗಳ ಮಂಜೂರಾತಿಗಾಗಿ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜೊತೆಗೆ ಸ್ವ-ಸಹಾಯ ಸಂಘದ ಸದಸ್ಯರಿಗೆ ಕೋವಿಡ್-19 ವ್ಯಾಕ್ಸಿನೇಷನ್ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ಸಿದ್ದಲಿಂಗೇಶ್ವರ ಪಾಟೀಲ್, ಡಾ.ಭರತ್, ಡಾ.ರಾಜಶೇಖರ್ ಮ್ಯಾಗೇರಿ, ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯಕ್, ಬೆಟಗೇರಿ ವಿಭಾಗದ ಮೇಲ್ವಿಚಾರಕ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *