ಸಂಗೊಳ್ಳಿಯ ಸೈನಿಕ ಶಾಲೆಯಲ್ಲಿ ಕೆಚ್ಚೆದೆಯ ರಾಯಣ್ಣನಂತ ಸೈನಿಕರನ್ನು ತಯಾರಿಸುತ್ತೇವೆ: ಕಾರಜೋಳ

ಬೆಳಗಾವಿ: ಕೆಲವೇ ದಿನಗಳಲ್ಲಿ ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ಲೋಕಾರ್ಪಣೆಗೊಳ್ಳಲಿದೆ. ಈ ಶಾಲೆಯಲ್ಲಿ ಸಂಗೊಳ್ಳಿ ರಾಯಣ್ಣನನಂತಹ ಸೈನಿಕರನ್ನು ರಾಷ್ಟ್ರದ ರಕ್ಷಣೆಗಾಗಿ ತಯಾರು ಮಾಡುತ್ತೇವೆ ಎಂದು ಜಲಸಂಪನ್ಮೂಲ ಇಲಾಖೆ ಸಚಿವ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ಬಸವರಾಜ್ ಕಟ್ಟಿಮನಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತಿ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಸಚಿವ ಗೋವಿಂದ ಕಾರಜೋಳ ಚಾಲನೆ ನೀಡಿದರು. ಇದೇ ವೇಳೆ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದರು. ಇದನ್ನೂ ಓದಿ: ಹುತಾತ್ಮ ಸೋನಿಯಾ ಗಾಂಧಿ – ಭಾಷಣ ವೇಳೆ ಡಿಕೆಶಿ ಯಡವಟ್ಟು

ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಗೋವಿಂದ ಕಾರಜೋಳ ಅವರು, ಸಂಗೊಳ್ಳಿ ರಾಯಣ್ಣನ ಜಯಂತಿ ಉತ್ಸವ ಮಾಡುವುದರ ಜೊತೆಗೆ ಸಂಗೊಳ್ಳಿ ರಾಯಣ್ಣನವರ ಹೆಸರಿನಲ್ಲಿ ಸಂಗೊಳ್ಳಿಯಲ್ಲಿ ಒಂದು ಸೈನಿಕ ಶಾಲೆಯನ್ನು 150 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಅದು ಕೆಲವೇ ದಿನಗಳಲ್ಲಿ ಲೋಕಾರ್ಪಣೆ ಆಗಲಿದೆ. ಮಹನೀಯರ ಹೆಸರಿನಲ್ಲಿ ಕೇವಲ ಸಮುದಾಯ ಭವನ ಕಟ್ಟುವುದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ದೇಶದ ಮಹನೀಯರ ಹೆಸರಿನಲ್ಲಿ ಶಾಲೆಗಳನ್ನು ತೆರೆಯುವ ಮೂಲಕ ಅವರನ್ನು ಜೀವಂತವಾಗಿ ಇಡುವ ಕೆಲಸ ಮಾಡಬೇಕು ಎಂದು ತಮ್ಮ ಅಭಿಪ್ರಾಯಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಬೆನಕೆ, ಡಿಸಿ ಮಹಾಂತೇಶ್ ಹಿರೇಮಠ, ಅಪರ ಜಿಲ್ಲಾಧಿಕಾರಿ ಅಶೋಕ್ ದುಡಗುಂಟಿ, ಜಿಲ್ಲಾ ಪಂಚಾಯತಿ ಸಿಇಓ ದರ್ಶನ್, ಅಶೋಕ್ ಸದಲಗೆ, ವಿಶೇಷ ಉಪನ್ಯಾಸಕ ನೀಡಿದ ಮಹೇಶ್ ಚನ್ನಂಗಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *