ಮಡಿಕೇರಿ: ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ನಿರಾಶ್ರಿತರ ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಅಡಿಗಲ್ಲು ಹಾಕಿದಂತಹ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರಿನಲ್ಲಿ 2018ನೇ ಸಾಲಿನಲ್ಲಿ ಜಿಲ್ಲೆಯ ನಿರಾಶ್ರಿತರಿಗೆ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಮನೆಗಳನ್ನು ನಿರ್ಮಿಸಲು ಶ್ರಮಿಸಿತ್ತು. ಆದರೆ ಬಿಜೆಪಿ ಸರ್ಕಾರದಲ್ಲಿ ಕನಿಷ್ಠ ಸೌಜನ್ಯಕ್ಕಾದರೂ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಇದೊಂದು ಬಿಜೆಪಿ ನೇತೃತ್ವದ ಪ್ರಯೋಜಿತ ಕಾರ್ಯಕ್ರಮವಾಗಿದೆ. ಯೋಜನೆಯ ಅನುಷ್ಠಾನಕ್ಕೆ ಶ್ರಮಿಸಿದ ನಾಯಕರನ್ನು ಕಡೆಗಣಿಸಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ ಗಣೇಶ್ ನೇತೃತ್ವದಲ್ಲಿ ಪಕ್ಷದ ನೂರಾರು ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಕುಮಾರಸ್ವಾಮಿ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಕೊಡಗಿಗೆ ಸಾಕಷ್ಟು ಶ್ರಮಿಸಿದ್ದಾರೆ. 840 ನಿರಾಶ್ರಿತರ ಮನೆಗಳಿಗೆ ಅಡಿಗಲ್ಲು ಹಾಕಿದರು. ಅವರ ಶ್ರಮ ಹಾಗೂ ಸಾಧನ ಇದರಲ್ಲಿ ಮುಖ್ಯವಾಗಿದೆ. ಅವರ ಸಾಧನೆಯನ್ನು ಮರೆಮಾಚಿ ಕಾರ್ಯಕ್ರಮಕ್ಕೆ ಆಹ್ವಾನಿಸದೆ ಇರುವ ಬಿಜೆಪಿ ನೀಚ ಸರ್ಕಾರ. ಇಂತಹ ಕ್ರಮವನ್ನು ನಾವು ಖಂಡಿಸುತ್ತೇವೆ ಎಂದು ಕಿಡಿಕಾರಿದರು. ಇದೇ ವೇಳೆ ಪ್ರತಿಭಟನಾ ನಿರತರನ್ನು ಪೊಲೀಸರು ಬಂಧಿಸಿ ಕರೆದೊಯ್ಯಲಾಯಿತು.


Leave a Reply