ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ: ಬಿಎಸ್‍ವೈ

ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಮಧ್ಯಾಹ್ನ ನವದೆಹಲಿಗೆ ಆಗಮಿಸಿದರು. ಕಲಬುರಗಿಯಲ್ಲಿ ಕಾರ್ಯಕ್ರಮದ ಬಳಿಕ ವಿಶೇಷ ವಿಮಾನದ ಮೂಲಕ ದೆಹಲಿ ತಲುಪಿದರು.

ದೆಹಲಿ ತಲುಪಿದ ಬಳಿಕ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದು, ಸಂಪುಟ ವಿಸ್ತರಣೆ ಮಾಡಬೇಕೋ ಅಥವಾ ಪುನಾರಚನೆ ಮಾಡಬೇಕೋ ಅನ್ನೋ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದರು.

ಎರಡು ದಿನಗಳ ತಮ್ಮ ಭೇಟಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒಳಗೊಂಡಂತೆ ಪ್ರಮುಖ ಕೇಂದ್ರ ಸಚಿವರನ್ನು ಭೇಟಿ ರಾಜ್ಯದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಲಿದ್ದೇನೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *