ಸಂಸದ ಕರಡಿ ಸಂಗಣ್ಣಗೆ ಕೊರೊನಾ ಸೋಂಕು

ಕೊಪ್ಪಳ: ಸಂಸದ ಕರಡಿ ಸಂಗಣ್ಣ ಅವರಿಗೆ ಕೊರೊನಾ ಸೋಂಕು ತಗುಲಿದೆ. ಸಂಸದರು ಸಾಮಾಜಿಕ ಜಾಲತಾಣಗಳ ಕೊರೊನಾ ಸೋಂಕು ತಗುಲಿರುವ ವಿಚಾರವನ್ನು ತಿಳಿಸಿದ್ದಾರೆ.

ನನ್ನ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಭೇಟಿಯಾದ ಕಾರ್ಯಕರ್ತರು ಹಾಗೂ ಮುಖಂಡರು ಯಾರಿಗಾದರೂ ಕೊರೊನಾ ಲಕ್ಷಣಗಳು ಕಂಡು ಬಂದ್ರೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ. ಕ್ಷೇತ್ರದ ಜನರ ತುರ್ತು ಕೆಲಸಗಳಿಗೆ ನನ್ನ ಆಪ್ತ ಸಹಾಯಕರನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು ಎಂದು ಸಂಸದರು ಟ್ವೀಟ್ ಮಾಡಿದ್ದಾರೆ.

ಜಿಲ್ಲೆಯ ಶಾಸಕರಾದ ಪರಣ್ಣ ಮುನವಳ್ಳಿ, ರಾಘವೇಂದ್ರ ಹಿಟ್ನಾಳ್, ಹಾಲಪ್ಪ ಆಚಾರ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು. ಎಲ್ಲರೂ ಐಸೋಲೇಶನ್ ನಲ್ಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮಂಗಳವಾರ ಕೊಪ್ಪಳದಲ್ಲಿ 169 ಮಂದಿಗೆ ಕೊರೊನಾ ತಗುಲಿದ್ದು, ಸೋಂಕಿತರ ಸಂಖ್ಯೆ 3,669ಕ್ಕೇ ಏರಿಕೆಯಾಗಿದೆ.

Comments

Leave a Reply

Your email address will not be published. Required fields are marked *