ಚಾಮರಾಜನಗರ: ನಾನು ಸಚಿವ ಸಂಪುಟ ರಚನೆಯಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಮಾತನಾಡಿದ ಅವರು, ಕೆಲ ದಿನಗಳಲ್ಲೇ ಸಚಿವ ಸಂಪುಟ ರಚನೆಯಾಗಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಕೇಂದ್ರದ ನಾಯಕರ ಜೊತೆ ಚರ್ಚಿಸಿ ನಿರ್ಧರಿಸಲಿದ್ದಾರೆ ಎಂದರು.

ತಂದೆಯಂತೆ ಮಗ ಆಗುವುದಿಲ್ಲ ಎಂದು ಬೊಮ್ಮಾಯಿ ಬಗ್ಗೆ ಸಿದ್ದರಾಮಯ್ಯ ಮಾತನಾಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇತ್ತೀಚಿಗೆ ಸಿದ್ದರಾಮಯ್ಯ ಸಂಯಮ ಕಳೆದುಕೊಂಡು ಮಾತನಾಡುತ್ತಿದ್ದಾರೆ. ವಿಪಕ್ಷ ನಾಯಕರಾಗಿರುವ ಅವರಿಗೆ ಇದು ಶೋಭೆ ತರುವುದಿಲ್ಲ ಎಂದು ಗರಂ ಆದರು. ಇದನ್ನೂ ಓದಿ: ಸಚಿವಾಕಾಂಕ್ಷಿ ರೇಣುಕಾಚಾರ್ಯಗೆ ಮತ್ತೆ ಸಿ.ಡಿ ಭಯ- ಕೋರ್ಟ್ ಮೊರೆ

ನೂತನ ಸಿಎಂ ಜನಪರ ಕಾರ್ಯಕ್ರಮಗಳನ್ನು ನೀಡಿದ್ದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಶ್ಲಾಘಿಸಿದರು.

Leave a Reply