ಕಾರವಾರ/ರಾಯಚೂರು: ರಾಜ್ಯದಲ್ಲಿ ಮಳೆ ಮುಂದುವರಿದಿದ್ದು, ಹಳ್ಳಕೊಳ್ಳಗಳು ಭರ್ತಿ ಆಗಿವೆ. ಕಡಲತೀರಕ್ಕೆ ಭಾರೀ ಗಾತ್ರದ ಅಲೆಗಳು ಅಬ್ಬರಿಸುತ್ತಿದ್ದು, ಮರಗಳು ಕೊಚ್ಚಿ ಹೋಗಿವೆ.

ಕಾರವಾರ:
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದ್ದು ಇದೇ ತಿಂಗಳ 15 ರ ವರೆಗೆ ರೆಡ್ ಅಲರ್ಟ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಸಮುದ್ರದ ಭೋರ್ಗರೆತ ಹೆಚ್ಚಾಗಿದ್ದು ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಅಲೆಗಳು ಏಳತೊಡಗಿದೆ. ಇದರಿಂದಾಗಿ ಸಮುದ್ರ ಕೊರೆತ ಪ್ರಾರಂಭವಾಗಿದ್ದು, ಕಾರವಾರ ಕಡಲತೀರ ಭಾಗದಲ್ಲಿ ಮರಗಳು, ತಡೆಗೋಡೆ ಸಮುದ್ರದಲ್ಲಿ ಕೊಚ್ಚಿಹೋಗಿವೆ. ಇನ್ನು ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಸಂಪ್ರದಾಯಿಕ ಮೀನುಗಾರಿಗೆ ನಿರ್ಬಂಧ ವಿಧಿಸಲಾಗಿದ್ದು ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ಸದ್ಯ ಮಳೆಗಿಂತ ಸಮುದ್ರದ ಆರ್ಭಟ ಹೆಚ್ಚಿದ್ದು ಇದರಿಂದಾಗಿ ಕಡಲ ಕೊರತ ಸಹ ಕರಾವಳಿ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಪ್ರಾರಂಭವಾಗಿದೆ.
ರಾಯಚೂರಿಲ್ಲಿ ತುಂಬಿ ಹರಿಯುತ್ತಿರುವ ಹಳ್ಳಗಳು
ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜೋರು ಮಳೆ ಸುರಿಯುತ್ತಿದೆ. ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣ ಮುಂದುವರಿದಿದೆ. ಇದನ್ನೂ ಓದಿ: ಉಡುಪಿಯಲ್ಲಿ ಮುಂದುವರಿದ ಮುಂಗಾರು ಮಳೆ- ಐದು ದಿನ ಆರೆಂಜ್ ಅಲರ್ಟ್

ಮಾನ್ವಿ ತಾಲೂಕಿನ ಮುಷ್ಟೂರು ಹಳ್ಳಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದುಬಂದಿದ್ದು ರಸ್ತೆ ಸಂಪರ್ಕ ಕಡಿತವಾಗಿದೆ. ಸೇತುವೆಯಿಲ್ಲದೆ ನೀರಿನಲ್ಲೇ ಜನ ಓಡಾಡುತ್ತಿದ್ದಾರೆ. 2009 ರಲ್ಲಿ ಕೊಚ್ಚಿಹೋದ ಸೇತುವೆಯನ್ನು ಈವರೆಗೂ ಪುನರ್ ನಿರ್ಮಾಣ ಮಾಡಿಲ್ಲ. ನೀರಿಲ್ಲದ ವೇಳೆ ಹಳ್ಳದಲ್ಲೇ ಜನ ಓಡಾಡುತ್ತಿದ್ದರು. ಈಗ ಸುರಿಯುತ್ತಿರುವ ಮಳೆಗೆ ಹಳ್ಳದಲ್ಲಿ ಹೆಚ್ಚು ನೀರು ಬಂದಿರುವುದರಿಂದ ರಸ್ತೆ ಮಾರ್ಗ ಬಂದ್ ಆಗಿದೆ. ಇದನ್ನೂ ಓದಿ: ಮೈಶುಗರ್ ಖಾಸಗೀಕರಣದಲ್ಲಿ ಅಂಧ್ರದ ಕಂಪನಿಯೊಂದಿಗೆ ಬಿಎಸ್‍ವೈ ಕುಟುಂಬ ಶಾಮೀಲು: ಎಎಪಿ

ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ಹಿನ್ನೆಲೆ ಜಿಲ್ಲಾಡಳಿತ ಈಗಾಗಲೇ ನೋಡಲ್ ಅಧಿಕಾರಿಗಳನ್ನ ನೇಮಕ ಮಾಡಿದೆ. ಕಂಟ್ರೋಲ್ ರೂಂ ಸಹ ತೆರೆದಿದ್ದು ಮಳೆ ಅನಾಹುತಕ್ಕೆ ಸಿಲುಕುವ ಜನರ ರಕ್ಷಣೆಗೆ ಕ್ರಮಕೈಗೊಂಡಿದೆ. ಸತತ ಮಳೆಯಿಂದ ಜಿಲ್ಲೆಯ ಹಳ್ಳ ಹಾಗು ನದಿಗಳ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ನದಿ ಪಾತ್ರದ ಜನರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

Leave a Reply