ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧ ಅಲ್ಲ: ಸಚಿವ ಮಾಧುಸ್ವಾಮಿ

– ಜಾರಕಿಹೊಳಿ ರಾಜೀನಾಮೆ ಕೊಡಬೇಕಾಗಿಲ್ಲ

ಉಡುಪಿ: ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧ ಅಲ್ಲ ಅಂತ ಸುಪ್ರೀಂಕೋರ್ಟ್ ಹೇಳಿದೆ. ಜಾರಕಿಹೊಳಿ ಪ್ರಕರಣದಲ್ಲಿ ಆ ಹೆಣ್ಣುಮಗಳ ವರ್ತನೆ ನೋಡಿದರೆ ಇಚ್ಛೆಪಟ್ಟು ಹೋಗಿದ್ದಾರೆ ಅನ್ನೋ ಭಾವನೆ ಬರುತ್ತದೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.

ಉಡುಪಿಯ 2000 ಎಕ್ರೆ ಜಮೀನು ಪುನರುಜ್ಜೀವನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭ ಅವರು ಮಾಧ್ಯಮದ ಜೊತೆ ಮಾತನಾಡಿದರು. ನಾನು ತಿಳಿದ ಸಾಮಾನ್ಯ ಜ್ಞಾನದ ಪ್ರಕಾರ ಜಾರಕಿಹೊಳಿಗೆ ಶಿಕ್ಷೆ ಆಗಲಾರದು ಅನಿಸುತ್ತದೆ.

ಜಾರಕಿಹೊಳಿ ಅವರಿಗೆ ಸರ್ಕಾರ ಮತ್ತು ಪಕ್ಷದ ಕಡೆಯಿಂದ ಏನು ತೊಂದರೆ ಮಾಡಿಲ್ಲ. ಆಕಸ್ಮಿಕವಾದ ಘಟನೆಗೆ ಅವರು ಬಲಿಯಾಗಿದ್ದಾರೆ ಅಷ್ಟೇ. ನಾವೆಲ್ಲ ಅವರ ಬಗ್ಗೆ ಅನುಕಂಪ ಇಟ್ಟುಕೊಂಡಿದ್ದೇವೆ. ಇದೊಂದು ಕಾನೂನಾತ್ಮಕ ಮತ್ತು ನೈತಿಕ ವಿಚಾರ. ನೈತಿಕವಾಗಿ ಹೊಣೆ ಹೊತ್ತು ಅವರು ರಾಜೀನಾಮೆ ನೀಡಿದ್ದಾರೆ. ಕಾನೂನಾತ್ಮಕವಾಗಿಯೂ ಯಾವುದೇ ಸಮಸ್ಯೆ ಇದೆ ಅನಿಸಲ್ಲ. ಎಲ್ಲವನ್ನು ಎದುರಿಸಲೇಬೇಕು ಎಂದರು. ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗ ಯಾರನ್ನು ದೂರ ಸಾಧ್ಯವಿಲ್ಲ. ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿಲ್ಲ ಎಂದರು. ಇದನ್ನೂ ಓದಿ: ಅತ್ಯಾಚಾರ ಪ್ರಕರಣದಿಂದ ಸಾಹುಕಾರ್ ಬಚಾವ್ ಆಗ್ತಾರಾ? ಒಪ್ಪಿತ ಸೆಕ್ಸ್ ಅಂತ ಬಿ ರಿಪೋರ್ಟ್ ಹಾಕ್ತಾರಾ?

ಬಿಜೆಪಿಗೆ ಬರೋದಾದ್ರೆ ಬನ್ನಿ:
ಪಕ್ಷ ವಿಸ್ತರಣೆ ಮಾಡುವುದು ಪ್ರತಿ ರಾಜಕೀಯ ಪಕ್ಷದ ಧ್ಯೇಯ. ಬಿಜೆಪಿಗೆ ಜೆಡಿಎಸ್ ಕಾಂಗ್ರೆಸ್ ಪಕ್ಷದಿಂದ ಯಾರಾದರೂ ಬರುವುದಾದರೆ ಬನ್ನಿ. ನಿಮಗೆ ಭಾರತೀಯ ಜನತಾ ಪಾರ್ಟಿಗೆ ಸ್ವಾಗತ ಎಂದು ಸಚಿವ ಮಾಧುಸ್ವಾಮಿ ಕರೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ನಾಯಕರು ಕಾಂಗ್ರೆಸ್‍ಗೆ ಬರಬಹುದು ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ಮಾತನ್ನಾಡಿದ್ದಾರೆ.

ಡಿಕೆಶಿ ಪಾಪದ ಮಾತು:
ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ 80 ಕೋಟಿ ಜನಕ್ಕೆ ಉಚಿತ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ 2000 ಕೋಟಿ ರೂಪಾಯಿ ತೆಗೆದಿಟ್ಟಿದೆ. ಡಿಕೆಶಿ ಪಾಪದ ಮಾತಿನಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ. ಟೀಕೆ ಮಾಡುವುದನ್ನು ಮಾಡಿ ಅದು ನಿಮ್ಮ ಡ್ಯೂಟಿ, ವಿರೋಧ ಪಕ್ಷದಲ್ಲಿ ನನಗಿಂತ ಚೆನ್ನಾಗಿ ಕೆಲಸ ಮಾಡಿದವರು ಯಾರು ಇಲ್ಲ ಎಂದರು.

Comments

Leave a Reply

Your email address will not be published. Required fields are marked *