ಸರ್ಕಾರಕ್ಕೆ ಮುಜುಗರ ಆಗ್ಬಾರ್ದು ಅಂತ ರಾಜೀನಾಮೆ: ರಮೇಶ್ ಜಾರಕಿಹೊಳಿ

ಬೆಂಗಳೂರು: ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರ ಆಗಬಾರದು ಎಂದು ರಾಜೀನಾಮೆ ನೀಡಿರುವುದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸಿಎಂ ಸೂಚನೆಗೂ ಮುನ್ನವೇ ರಾಜೀನಾಮೆ ನೀಡಿದ್ದು, ಬೆಳಗ್ಗೆ 9 ಗಂಟೆಗೆ ರಾಜೀನಾಮೆ ನೀಡಿರುವುದಾಗಿ ಬೆಳಗಾವಿ ಸಾಹುಕಾರ ನಗರದಲ್ಲಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷಕ್ಕೆ ಮುಜುಗರ ಆಗಬಾರದು. ನನ್ನಿಂದ ಸಿಎಂಗೆ ಇರುಸುಮುರುಸು ಆಗಬಾರದು. ಸದನದಲ್ಲಿ ಆಡಳಿತ ಪಕ್ಷಕ್ಕೆ ಮುಜುಗರವಾಗೋದು ಬೇಡ. ಆದರೆ ಈ ಬಗ್ಗೆ ಸೂಕ್ತ ತನಿಖೆಯಾಗಲೇಬೇಕು. ಷಡ್ಯಂತ್ರ ನಡೆದಿರೋ ಬಗ್ಗೆಯೂ ಸಮರ್ಪಕ ವಿಚಾರಣೆಯಾಗಬೇಕು ಎಂದು ಇದೇ ವೇಳೆ ಜಾರಕಿಹೊಳಿ ಸಿಎಂಗೆ ಮನವಿ ಮಾಡಿದ್ದಾರೆ.

ಸುಳ್ಳು ಹೇಳಿದ್ರಾ ಸಾಹುಕಾರ..?
ಬೆಳಗ್ಗೆ 9 ಗಂಟೆಗೆ ರಾಜೀನಾಮೆ ಕೊಟ್ಟಿದ್ದೀನಿ ಎಂದಿರುವ ರಮೇಶ್ ಜಾರಕಿಹೊಳಿ, ಇಂದು ಎರಡು ಬಾರಿ ಛಾನ್ಸ್ ತೆಗೆದುಕೊಳ್ಳಲು ಮುಂದಾಗಿದ್ದರು ಎನ್ನಲಾಗಿದೆ. ಸಹೋದರ ಬಾಲಚಂದ್ರ ಜಾರಕಿಹೊಳಿ ಮೂಲಕ ಛಾನ್ಸ್ ತೆಗೆದುಕೊಳ್ಳಲು ಮುಂದಾಗಿದ್ದರಂತೆ. ಆದರೆ ಹೈಕಮಾಂಡ್ ನಿಂದ ಸಂದೇಶ ಬಂದಾಗ ನನ್ನಿಂದ ರಕ್ಷಣೆ ಆಗಲ್ಲ ಎಂದು ಸಿಎಂ ಸಂದೇಶ ರವಾನೆ ಮಾಡಿದ್ದು, ಹೀಗಾಗಿ ಅನಿವಾರ್ಯವಾಗಿ ಮಧ್ಯಾಹ್ನ 12.50ಕ್ಕೆ ರಾಜೀನಾಮೆಗೆ ಸಹಿ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಾಹುಕಾರ ರಾಜೀನಾಮೆ:
ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಔಟ್ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ ಬೆನ್ನಲ್ಲೇ ಇದೀಗ ರಾಜೀನಾಮೆ ನೀಡಲು ಒಪ್ಪಿಕೊಂಡಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

ಕೆಪಿಟಿಸಿಎಲ್‍ನಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿ ಸಂತ್ರಸ್ತ ಯುವತಿಯನ್ನು ಕಾಮಕ್ರಿಯೆಗೆ ಬಳಸಿಕೊಂಡಿರುವುದಾಗಿ ದೂರು ಕೊಡಲಾಗಿದೆ. ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಅವರು ನಿನ್ನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಲ್ಲದೆ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಡಿಸಿಪಿ ಅನುಚೇತ್, ಸಂತ್ರಸ್ತೆಯ ಹೇಳಿಕೆ ಪಡೆದ ಮೇಲಷ್ಟೇ ಎಫ್‍ಐಆರ್ ದಾಖಲಿಸುವುದಾಗಿ ತಿಳಿಸಿದ್ದರು.

Comments

Leave a Reply

Your email address will not be published. Required fields are marked *