ಸಾರಿಗೆ ನೌಕರ ಆತ್ಮಹತ್ಯೆಗೆ ಶರಣು

ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲಿ ಸಾರಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿವಕುಮಾರ್ ನೀಲಗಾರ (40) ಆತ್ಮಹತ್ಯೆ ಮಾಡಿಕೊಂಡ ನೌಕರ. ಇವರು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಘಟಕದ ಬಸ್ ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು. ಸವದತ್ತಿಯಲ್ಲಿರುವ ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ವಾಕರಾರಸಾ ಸಂಸ್ಥೆಯ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಕಳೆದ 12 ವರ್ಷಗಳಿಂದ ಸೇವೆಸಲ್ಲಿಸುತ್ತಿದ್ದರು.

ಸದ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಇಂದು ಸಿದ್ದರಾಮಯ್ಯ ಅವರು ಸವದತ್ತಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ಪ್ರಕರಣ ಸಂಬಂಧ ಮುಷ್ಕರ ನಿರತ ಸಾರಿಗೆ ನೌಕರರು ಇಂದು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಲಿದ್ದಾರೆ.

Comments

Leave a Reply

Your email address will not be published. Required fields are marked *