ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.
ಇಂದು ಬೆಳಗ್ಗೆ ತುರ್ತು ಸಭೆಯ ಬಳಿಕ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಟೆಸ್ಟ್ ಮಾಡಿಸಿದ ವೇಳೆ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಸದ್ಯ ಸಿಎಂ ಅವರನ್ನು ಮಣಿಪಾಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಜ್ವರದ ಹಿನ್ನಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ
— B.S.Yediyurappa (@BSYBJP) April 16, 2021
ಮೂರು ದಿನಗಳ ಹಿಂದೆಯಷ್ಟೇ ಬೆಳಗಾವಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಸಿಎಂ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ವೈದ್ಯರು ಸಿಎಂ ಉಳಿದುಕೊಂಡಿದ್ದ ಹೋಟೆಲ್ ಗೆ ತೆರಳಿ ವೈದ್ಯಕೀಯ ತಪಾಸಣೆ ನಡೆಸಿದ್ದರು. ಆ ಬಳಿಕವೂ ಸಿಎಂ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ನಂತರ ಬೆಂಗಳೂರಿಗೆ ಮರಳಿದ್ದರು. ಅಲ್ಲದೆ ಇಂದು ತುರ್ತು ಸಭೆ ಕರೆದಿದ್ದರು.

ಈ ಹಿಂದೆ ಸಿಎಂ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಗುಣಮುಖರಾಗಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದಾಗ ಮತ್ತೆ ಟೆಸ್ಟ್ ಮಾಡಿಸಿದ್ದು, ಅದರಲ್ಲಿ ನೆಗೆಟಿವ್ ಬಂದಿತ್ತು. ಇದೀಗ ಮತ್ತೆ ಇಂದು ಆರೋಗ್ಯ ಕೈಕೊಟ್ಟ ಹಿನ್ನೆಲೆಯಲ್ಲಿ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ.
ಕೊರೊನಾ ಸೋಂಕು ಪೀಡಿತರಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ.
ಕರೋನಾದಿಂದ ಚೇತರಿಸಿಕೊಂಡು ಎಂದಿನಂತೆ ಆಡಳಿತದಲ್ಲಿ ಸಕ್ರಿಯರಾಗುವಂತೆ ಭಗವಂತನಲ್ಲಿ ಕೋರುತ್ತೇನೆ.— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 16, 2021

Leave a Reply