ಸಿಎಂ ರೇಸ್ ಬಗ್ಗೆ ನಾನು ಹೇಳಿಕೆ ನೀಡಲ್ಲ, 1 ಸಹಿ ಸಂಗ್ರಹ ನಡೆದಿತ್ತು: ಬೆಲ್ಲದ

ಧಾರವಾಡ: ಶಾಸಕರ ಮಧ್ಯೆ ಯಾವುದೇ ಸಹಿ ಸಂಗ್ರಹ ನಡೆದಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ.

ಸಿಎಂ ರೇಸ್‍ನಲ್ಲಿ ಅರವಿಂದ್ ಬೆಲ್ಲದ ಇದ್ದಾರೆ, ಸಹಿ ಸಂಗ್ರಹ ಮಾಡಿದ್ದಾರೆ ಎಂಬ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರೇಣುಕಾಚಾರ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಡಲಾರೆ. ಅದರ ಬಗ್ಗೆ ನಾನು ಏನೂ ಹೇಳಲಾರೆ ಎಂದರು.  ಇದನ್ನೂ ಓದಿ: ಯಡಿಯೂರಪ್ಪ ಪರವಾಗಿ 65ಕ್ಕೂ ಹೆಚ್ಚು ಶಾಸಕರ ಸಹಿ: ರೇಣುಕಾಚಾರ್ಯ

ಯಾವುದೇ ಸಹಿ ಸಂಗ್ರಹವನ್ನು ಹೈಕಮಾಂಡ್ ಸಹಿಸುವುದಿಲ್ಲ. ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಯಾವುದೇ ಸಹಿ ಸಂಗ್ರಹ ಆಗಿಯೇ ಇಲ್ಲ. ಒಂದೇ ಸಹಿ ಸಂಗ್ರಹ ನಡೆದಿತ್ತು. ಅದು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದು ಮಾತ್ರ. ಸದನ ಸದನ ನಡೆದಾಗ ಸಹಿ ಮಾಡಿದ್ದೇವೆ. ಅದೊಂದೆ ಸಹಿ ಸಂಗ್ರಹ ನಡೆದಿದೆ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಸಿಎಂ ರಾಜೀನಾಮೆ ಮಾತುಗಳ ಹಿಂದಿನ ರಹಸ್ಯ ತಿಳಿಸಿದ ಶಾಸಕ ರಾಜೂಗೌಡ

ನಮ್ಮದು ಶಿಸ್ತಿನ ಪಕ್ಷವಾಗಿದ್ದು, ಇಲ್ಲಿ ಸಹಿ ಸಂಗ್ರಹಕ್ಕೆ ಅವಕಾಶ ಇಲ್ಲ. ಹಾಗೆ ಮಾಡಿದವರ ಮೇಲೆ ಹೈಕಮಾಂಡ್ ಕ್ರಮ ಕೈಗೊಳ್ಳುತ್ತದೆ. ಪಕ್ಷದ ಶಾಸಕಾಂಗ ಸಭೆಯಲ್ಲೇ ಏನೇ ಇದ್ದರೂ ಚರ್ಚೆ ನಡೆಯುತ್ತದೆ. ಗ್ರಾಮೀಣದ ರಸ್ತೆ, ಗ್ರಾಮಿಣ ಭಾಗಕ್ಕೆ ಸಂಬಂಧಿಸಿದ ಶಾಸಕರ ಸಹಿ ಅದು. ನನ್ನ ಕ್ಷೇತ್ರದಲ್ಲಿ ಏನು ಮಾಡಬೇಕು ನಾನು ಮಾಡುತ್ತಿರುವೆ ಎಂದು ಉತ್ತರಿಸಿದರು.

Comments

Leave a Reply

Your email address will not be published. Required fields are marked *