ಸಿಎಂ, ವಿಜಯೇಂದ್ರ, 7 ಮಂದಿ ಆಪ್ತರ ವಿರುದ್ಧ ದೂರು

– ಅಧಿಕಾರ ದುರ್ಬಳಕೆ ಮಾಡಿ ಭ್ರಷ್ಟಾಚಾರ
– ದೂರು ನೀಡಿದ ಟಿಜೆ ಆಬ್ರಾಹಂ

ಬೆಂಗಳೂರು: ಸಿಎಂ ಬಿಎಸ್‍ವೈ ಪುತ್ರ ವಿಜಯೇಂದ್ರ ಮತ್ತು 7 ಮಂದಿ ಆಪ್ತರ ವಿರುದ್ಧ ಖಾಸಗಿ ದೂರು ದಾಖಲಾಗಿದೆ.

ತಮ್ಮ ಅಧಿಕಾರ ದುರ್ಬಳಕೆ ಮಾಡಿ ಭ್ರಷ್ಟಚಾರ ಎಸಗಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ದೂರು ನೀಡಿದ್ದಾರೆ. ಇದನ್ನೂ ಓದಿ: ನೋಟ್ ಬದಲಿಸಿಕೊಟ್ಟ ಚಂದ್ರಕಾಂತ್‍ಗೆ ಸರ್ಕಾರದ ಕೊಡುಗೆ – ರಾಮಲಿಂಗಂ ಕಂಪನಿಗೆ 150 ಕೋಟಿ ಕಾಮಗಾರಿ

ದೂರಿನಲ್ಲಿ ಏನಿದೆ?
ಕೊಲ್ಕತ್ತಾ ಮೂಲದ ಶೆಲ್ ಕಂಪನಿಗಳಲ್ಲಿ ಬಿಎಸ್‍ವೈ ಕುಟುಂಬಸ್ಥರು ಹೂಡಿಕೆ ಮಾಡಿದ್ದಾರೆ. ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಮ್ ಜೊತೆ ವಿಜಯೇಂದ್ರ, ಶಶಿಧರ ಮರಡಿ ಲಿಂಕ್ ಇದೆ. ಸರ್ಕಾರದ ವಿವಿಧ ಕಾಮಗಾರಿಗಳಿಗೆ ಫಂಡ್ ರಿಲೀಸ್ ಮಾಡಲು ಸಿಎಂ ಆಪ್ತರು ಒತ್ತಡ ಹಾಕಿದ್ದಾರೆ. ಸರ್ಕಾರ ವಿವಿಧ ಇಲಾಖೆ ಯೋಜನೆಗಳಲ್ಲಿ ಒತ್ತಡ ಹಾಕಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.

ದೂರಿಗೆ ಪೂರಕವಾಗಿ ವಾಟ್ಸಪ್ ಚಾಟ್ ಸಲ್ಲಿಕೆಯಾಗಿದ್ದು, 2020ರ ಅಕ್ಟೋಬರ್ 19 ರಂದು ಶಶಿಧರ್, ಚಂದ್ರಕಾಂತ್ ಅವರಲ್ಲಿ ಮೆಸೇಜ್ ಮಾಡಿ ಹಣ ಕೇಳಿದ್ದಾರೆ. ಯಾವಾಗ ತಮ್ಮ ಬ್ಯಾಲೆನ್ಸ್ ಕ್ಲೀಯರ್ ಮಾಡ್ತಿರಾ ಎಂದು ಪ್ರಶ್ನೆ ಮಾಡಿದ್ದಾರೆ.  ಇದನ್ನೂ ಓದಿ : ಐಟಿ ದಾಳಿ ವೇಳೆ ಸಿಕ್ಕಿಬಿದ್ದಿದ್ದ ಚಂದ್ರಕಾಂತ್ ಈಗ ಶಶಿಕಲಾ ಕೇರ್ ಟೇಕರ್

ಮಧ್ಯಾಹ್ನ 2:36ಕ್ಕೆ ಮೆಸೇಜ್ ಮಾಡಿ ಕೇಳಿರುವ ಸಾಕ್ಷಿಗಳಿದೆ. ಅದಕ್ಕೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ಹಣ ನೀಡುತ್ತೇನೆ ಎಂದು ಚಂದ್ರಕಾಂತ್ ಹೇಳಿದ್ದಾರೆ. ಈ ಚಾಟ್‍ನಲ್ಲಿ ಶಶಿಧರ್ ಅವರಿಗೆ 3 ಕೋಟಿ ನೀಡುವ ಬಗ್ಗೆ ಮಾತುಕತೆ ನಡೆಸಿದ ಬಗ್ಗೆ ದಾಖಲೆ ಪತ್ತೆಯಾಗಿದೆ ಎಂದು ದೂರು ನೀಡಿದ್ದಾರೆ.

ಆರೋಪಿಗಳು ಯಾರು?
ಎ1 – ಸಿಎಂ ಬಿ.ಎಸ್ ಯಡಿಯೂರಪ್ಪ, ಎ2 – ಬಿ.ವೈ ವಿಜಯೇಂದ್ರ, ಎ3 – ಶಶಿಧರ್ ಮರಡಿ, ಎ4 – ಸಂಜಯ್ ಶ್ರೀ, ಎ5 – ಚಂದ್ರಕಾಂತ್ ರಾಮಲಿಂಗಮ್, ಎ6 – ಎಸ್.ಟಿ ಸೋಮಶೇಖರ್, ಎ7 – ಡಾ. ಜಿಸಿ ಪ್ರಕಾಶ್ ಐಎಎಸ್, ಎ8 – ಕೆ ರವಿ, ಎ9 – ವಿರೂಪಾಕ್ಷಪ್ಪ ಯಮಕನಮರಡಿ.

Comments

Leave a Reply

Your email address will not be published. Required fields are marked *