ಸಿದ್ದರಾಮಯ್ಯ ಬಿಟ್ಟರೆ ಕಾಂಗ್ರೆಸ್ ಝೀರೊ: ರೇವಣ್ಣ

ಹಾಸನ: ಸಿದ್ದರಾಮಯ್ಯ ಇರೋದಕ್ಕೆ ಕಾಂಗ್ರೆಸ್‍ಗೆ 70 ಸೀಟ್ ಬಂದಿದೆ. ಸಿದ್ದರಾಮಯ್ಯನವರನ್ನು ಬಿಟ್ಟರೆ ಕಾಂಗ್ರೆಸ್ ಝೀರೊ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರು ಜೆಡಿಎಸ್ ಬಗ್ಗೆ ಮಾಡುವ ಟೀಕೆಗೆ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯರಿಂದ ಕಾಂಗ್ರೆಸ್ ಉಳಿದುಕೊಂಡಿದೆ. ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದೇ ಹೋಗೋದು. ದೇವೇಗೌಡರನ್ನು, ಕುಮಾರಣ್ಣನನ್ನು ಮುಗಿಸಿದ್ದು ಕಾಂಗ್ರೆಸ್. ದೇವೇಗೌಡರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಿದ ಶಾಪದಿಂದಾಗಿ ಕಾಂಗ್ರೆಸ್ ಈ ಪರಿಸ್ಥಿತಿಗೆ ಬಂದಿದೆ ಎಂದು ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ನಿಷ್ಕ್ರಿಯ ರಾಜ್ಯ ಸರ್ಕಾರವನ್ನ ವಜಾಗೊಳಿಸಬೇಕು: ಸಿದ್ದರಾಮಯ್ಯ

ಗೃಹ ಸಚಿವರನ್ನು ಭೇಟಿ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹೊಳೆನರಸೀಪುರದಲ್ಲಿ ಪೊಲೀಸ್ ಠಾಣೆ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಇದರ ಕೆಲಸ ಅರ್ಧಕ್ಕೆ ನಿಂತಿದೆ, ಹೀಗಾಗಿ ಸಚಿವರನ್ನು ಭೇಟಿ ಮಾಡಿದೆ. ಅವರ ಭೇಟಿ ವೇಳೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ. ರಾಜಕೀಯ ಚರ್ಚೆ ಮಾಡೋಕೆ ನಾನೇನು ರಾಷ್ಟ್ರೀಯ ನಾಯಕನಾ ಎಂದು ರೇವಣ್ಣ ಪ್ರಶ್ನಿಸಿದರು.

Comments

Leave a Reply

Your email address will not be published. Required fields are marked *