ಸಿದ್ದರಾಮಯ್ಯ ಸಿಎಂ ಕ್ಯಾಂಡಿಡೇಟ್ ಎಂದು ಘೋಷಿಸಿದರೆ 150 ಸೀಟ್ ಫಿಕ್ಸ್: ಅಖಂಡ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆಗೆ ಹೋದರೆ 130 ರಿಂದ 150 ಸ್ಥಾನ ಕಾಂಗ್ರೆಸ್ಸಿಗೆ ಬರಲಿದೆ ಎಂದು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, 2013 ರಿಂದ 18ರ ವರೆಗೆ ಕರ್ನಾಟಕ ಮುಖ್ಯಮಂತ್ರಿ ಆಗಿದ್ದವರು ಸಿದ್ದರಾಮಯ್ಯ. ಜನರ ಕೂಡ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಬೇಕು ಅಂತಿದ್ದಾರೆ. ನನ್ನ ಅಭಿಪ್ರಾಯ ಕೂಡ ಅದೇ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡಿ.ಕೆ ಶಿವಕುಮಾರ್​ಗೆ ಇನ್ನೂ ವಯಸ್ಸಿದ್ದು, ಸಿದ್ದರಾಮಯ್ಯ ಸಿಎಂ ಆಗಲಿ: ರಾಮಪ್ಪ

ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ರಾಜ್ಯಕ್ಕೆ ಒಳ್ಳೇದಾಗುತ್ತದೆ. ಸಿದ್ದರಾಮಯ್ಯ ಕೈ ಬಲಪಡಿಸುವ ಕೆಲಸ ಮಾಡುತ್ತೇವೆ. ಸಿದ್ದರಾಮಯ್ಯ ನಮ್ಮ ನಾಯಕರು. ನಮ್ಮನ್ನ ಪಕ್ಷಕ್ಕೆ ಕರೆದುಕೊಂಡು ಬಂದವರು ಸಿದ್ದರಾಮಯ್ಯ. ಡಿ.ಕೆ ಶಿವಕುಮಾರ್ ಪಕ್ಷದ ನಾಯಕರು. ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆಗೆ ಹೋದರೆ 130 ರಿಂದ 150 ಸೀಟ್ ಬರುತ್ತೆ ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಬೇಕು. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಘೋಷಣೆ ವಿಚಾರವಾಗಿ ಹೈಕಮಾಂಡ್ ಭೇಟಿ ಮಾಡಬೇಕಾದರೆ. ಎಲ್ಲರೂ ಕೂತು ಈ ಬಗ್ಗೆ ನಿರ್ಧಾರ ಮಾಡುತ್ತೇವೆ ಎನ್ನುವ ಮೂಲಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂಬ ಕೂಗಿಗೆ ಇನ್ನೋರ್ವ ಶಾಸಕ ಧ್ವನಿಗೂಡಿಸಿದ್ದಾರೆ.

Comments

Leave a Reply

Your email address will not be published. Required fields are marked *