ಸಿಲಿಂಡರ್ ಸ್ಫೋಟಕ್ಕೆ ಕುಸಿದು ಬಿತ್ತು 2 ಮನೆ – 7 ಮಂದಿ ಸಾವು

ಲಕ್ನೋ: ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಏಳು ಮಂದಿ ಮೃತಪಟ್ಟು ಏಳು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ.

ಸದ್ಯ ಘಟನೆಯ ಅವಶೇಷದಲ್ಲಿ ಸಿಲುಕಿದ್ದ ಒಬ್ಬ ವ್ಯಕ್ತಿಯನ್ನು ರಕ್ಷಿಸುವ ಕಾರ್ಯ ನಡೆಯುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿಕ್ರಿ ಗ್ರಾಮದ ಮನೆಯೊಂದರಲ್ಲಿ ಕಳೆದ ರಾತ್ರಿ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು, 2 ಮನೆ ಕುಸಿದು ಬಿದ್ದಿದೆ. ಘಟನೆಯಲ್ಲಿ 15 ಮಂದಿ ಅವಶೇಷದಲ್ಲಿ ಸಿಲುಕಿಕೊಂಡಿದ್ದು, ಅವರಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ.

ಘಟನೆ ವಿಚಾರವಾಗಿ ಕರೆ ಬಂದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಪಡೆ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ 14 ಮಂದಿಯನ್ನು ರಕ್ಷಿಸಲಾಗಿದೆ. ಅದರಲ್ಲಿ 7 ಮಂದಿ ಮೃತಪಟ್ಟಿದ್ದು, 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಮಕ್ಕಳು ಕೂಡ ಸೇರಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಮಿಶ್ರಾ ತಿಳಿಸಿದ್ದಾರೆ. ಇದನ್ನು ಓದಿ: ಗ್ಯಾಂಗ್ ರೇಪ್ ಪ್ರಕರಣ – ಟಿಕ್‍ಟಾಕ್ ಸ್ಟಾರ್‌ನಿಂದ ಬೆಂಗಳೂರಿಗೆ ಯುವತಿಯರ ಸಪ್ಲೈ..!

ದೊಡ್ಡ ಪ್ರಮಾಣದಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ನಾಪತ್ತೆಯಾದ ವ್ಯಕ್ತಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *