ಸೇತುವೆ ಶಿಥಿಲ- ತೀರ್ಥಹಳ್ಳಿ- ಉಡುಪಿ ಹೆದ್ದಾರಿ ಬಂದ್

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಹಾಗೂ ಉಡುಪಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ಎ ಸೇತುವೆ ಶಿಥಿಲಗೊಂಡಿದ್ದು, ವಾಹನ ಸವಾರರು ಆತಂಕಕ್ಕೊಳಗಾಗಿದ್ದಾರೆ. ಅಲ್ಲದೆ ತಾತ್ಕಾಲಿಕವಾಗಿ ಸೇತುವೆಯನ್ನು ಬಂದ್ ಮಾಡಲಾಗಿದೆ.

ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆ ಗ್ರಾಮದ ಬಳಿಯ ಸೇತುವೆ ಶಿಥಿಲಗೊಂಡಿದ್ದು, ಸೇತುವೆ ಮೇಲೆ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 169 ಎ ಗೆ ನಿರ್ಮಿಸಲಾಗಿರುವ ಸೇತುವೆ ಇದಾಗಿದ್ದು, ತೀರ್ಥಹಳ್ಳಿ- ಉಡುಪಿ ನಡುವೆ ಸಂಪರ್ಕ ಕಲ್ಪಿಸುತ್ತದೆ. ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ತಾತ್ಕಾಲಿಕವಾಗಿ ಸೇತುವೆ ಮೇಲೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ಇದು 100 ವರ್ಷಕ್ಕೂ ಹಳೆಯ ಸೇತುವೆಯಾಗಿದ್ದು, ಇಟ್ಟಿಗೆಯಿಂದ ನಿರ್ಮಿಸಲಾಗಿದೆ. ಹೀಗಾಗಿಯೇ ಸೇತುವೆ ಶಿಥಿಲಗೊಂಡಿದೆ. ಇನ್ನೆರಡು ದಿನಗಳಲ್ಲಿ ಸೇತುವೆ ದುರಸ್ಥಿಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡುತ್ತೇವೆ ಎಂದು ಎನ್.ಎಚ್. ಅಧಿಕಾರಿ ನಾಗರಾಜನಾಯ್ಕ್ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *