ಲಕ್ನೋ: ಸ್ವಾತಂತ್ರ್ಯೋತ್ಸವಕ್ಕೆ ಭಗತ್ ಸಿಂಗ್ ಪಾತ್ರದ ಅಭ್ಯಾಸದ ವೇಳೆ ಆಕಸ್ಮಕವಾಗಿ ಬಾಲಕ ನೇಣಿಗೆ ಬಲಿಯಾದ ಘಟನೆ ಉತ್ತರಪ್ರದೇಶದ ಬಡೌನ್ ಹಳ್ಳಿಯಲ್ಲಿ ನಡೆದಿದೆ.
ಶಿವಂ(10) ಮೃತ ಬಾಲಕನಾಗಿದ್ದಾನೆ. ಬಾಲಕ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪಾತ್ರ ಮಾಡುವಾಗ ನೇಣಿಗೆ ಹಾಕುವ ದೃಶ್ಯವನ್ನು ಅಭ್ಯಾಸ ಮಾಡುವಾಗ ಆಕಸ್ಮಿಕವಾಗಿ ಸಾವಿಗೀಡಾಗಿದ್ದಾನೆ.

ಈಗಾಗಲೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ದೇಶಾದ್ಯಂತ ಭಾರೀ ಸಿದ್ಧತೆಗಳು ನಡೆಯುತ್ತಿವೆ. ಇದೇ ವೇಳೆ ಅದೆಷ್ಟೋ ಮಕ್ಕಳು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್‍ರ ಪಾತ್ರ ಮಾಡೋದಕ್ಕೆ ಕಾತುರದಿಂದ ಕಾಯುತ್ತಿದ್ದಾರೆ. ಉತ್ತರಪ್ರದೇಶದ ಬಾಲಕ ನಾಟಕ ಅಭ್ಯಾಸ ಮಾಡುತ್ತಿದ್ದ. ಭಗತ್ ಸಿಂಗ್ ಅವರನ್ನು ಗಲ್ಲಿಗೇರಿಸವ ದೃಶ್ಯವನ್ನು ಅಭ್ಯಾಸ ಮಾಡುತ್ತಿದ್ದಾಗ, ಕುತ್ತಿಗೆಗೆ ಕುಣಿಕೆಯನ್ನು ಕಟ್ಟಿಕೊಂಡು ಸ್ಟೂಲ್ ಮೇಲೆ ನಿಂತಿದ್ದನು. ಈ ವೇಳೆ ಕಾಲು ಜಾರಿ ಪ್ರಾಣ ಕಳೆದುಕೊಂಡಿದ್ದಾನೆ. ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದೆ ಬಾಲಕನ ಅಂತ್ಯಸಂಸ್ಕಾರ ಮಾಡಿದ್ದಾರೆ ಎನ್ನಲಾಗಿದೆ.

Leave a Reply