ಹಲವು ವರ್ಷಗಳ ಪ್ರೀತಿಗೆ ಹೊಸ ಅರ್ಥ – ದಂಪತಿಗಳಾದ ಕ್ರಿಸ್‍ಮಿ ಜೋಡಿ

ಬೆಂಗಳೂರು: ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಪ್ರೇಮಿಗಳ ದಿನದಂದು ಸತಿಪತಿಗಳಾಗಿದ್ದಾರೆ.

ಪ್ರೇಮಿಗಳ ದಿನದಂದೇ ಲವ್ ಮಾಕ್ಟೇಲ್ ಖ್ಯಾತಿಯ ಜೋಡಿ ಕೃಷ್ಣ ಹಾಗೂ ಮಿಲನಾ ನಾಗರಾಜ್ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಕನಸು ಕಂಡಂತೆ ಈಜುಕೊಳದ ಮಧ್ಯೆ ನಿರ್ಮಿಸಿರುವ ಕಲರ್‍ಫುಲ್ ಮಂಟಪದಲ್ಲಿ ಸಪ್ತಪದಿ ತುಳಿದಿದ್ದಾರೆ. ಬೆಂಗಳೂರಿನ ರೆಸಾರ್ಟ್ ಒಂದರಲ್ಲಿ ಕೃಷ್ಣ ಹಾಗೂ ಮಿಲನಾ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಇಂದು ಬೆಳಿಗ್ಗೆ 9:30 ರಿಂದ 10:30ರ ನಡುವಿನ ಮುಹೂರ್ತದಲ್ಲಿ ಸಪ್ತಪದಿ ತುಳಿದಿದ್ದಾರೆ. ಚಿತ್ರರಂಗದ ಗಣ್ಯರು ಹಾಗೂ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ.

ಬುಹುದಿನಗಳಿಂದ ಪ್ರೀತಿಸುತ್ತಿದ್ದ ಜೋಡಿ ಇದೀಗ ಸಪ್ತಪದಿ ತುಳಿದಿದ್ದಾರೆ. ಕಳೆದ ಕೆಲವು ದಿನಗಳಿಂದ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜೋಡಿ ಮೆಹಂದಿ ಹಾಗೂ ಅರಿಶಿಣ ಶಾಸ್ತ್ರಗಳಲ್ಲಿ ಭಾಗಿಯಾಗಿರುವ ಫೊಟೋವನ್ನು ಸೋಷಿಯಲ್‍ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಕೃಷ್ಣ ಹಾಗೂ ಮಿಲನಾ ನಾಗರಾಜ್ ವಿವಾಹ ಇಂದು ಅದ್ಧೂರಿಯಾಗಿ ಸಂಭ್ರಮದಿಂದ ನಡೆದಿದೆ. ನಿನ್ನೆಯಷ್ಟೆ ಈ ಜೋಡಿ ಉಂಗುರ ಬದಲಿಸಿಕೊಂಡಿದ್ದು, ಅದರ ಜೊತೆಗೆ ಸಂಗೀತ ಕಾರ್ಯಕ್ರಮವನ್ನೂ ಆಚರಿಸಿಕೊಂಡಿದ್ದರು. ಈ ಫೊಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕಳ್ಳಲಾಗಿತ್ತು. ಅಭಿಮಾನಿಗಳು ನವ ಜೋಡಿಗೆ ಶುಭಕೋರಿದ್ದರು.

ಸೆಲೆಬ್ರಿಟಿ ಕಪಲ್ ಆಗಿರುವ ಮಿಲನಾ ಹಾಗೂ ಕೃಷ್ಣ ಅವರ ವಿವಾಹ ಇಂದು ಅದ್ಧೂರಿಯಾಗಿ ನಡೆದಿದೆ. ಅಂದುಕೊಂಡಂತೆ ಈ ಜೋಡಿ ಗ್ರ್ಯಾಂಡ್ ಆಗಿ ಮದುವೆ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ ನಡೆದಿರುವ ಸಂಗೀತ ಕಾರ್ಯಕ್ರಮದಲ್ಲಿ ಮಿಲನಾ ಹಾಗೂ ಕೃಷ್ಣ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *