ಹಾಸನದಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕಿಗೆ ಇಬ್ಬರು ಪೊಲೀಸರು ಬಲಿ

ಹಾಸನ: ಕೊರೊನಾ ಸೋಂಕು ತಗುಲಿ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಪೊಲೀಸರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ತಾಲೂಕಿನ ಗೊರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‍ಐ ದೊರೆಸ್ವಾಮಿ(56) ಹಾಗೂ ಹಾಸನ ನಗರ ಬಡಾವಣೆ ಪೊಲೀಸ್ ಠಾಣೆಯಲ್ಲಿ ಸಹಾಯಕ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಬಾಲಕೃಷ್ಣ(58) ಕೊರೊನಾ ಸೋಂಕಿಗೆ ಬಲಿಯಾದ ದುರ್ದೈವಿಗಳು.

ಮೃತ ಎಎಸ್‍ಐ ದೊರೆಸ್ವಾಮಿ ಕೆಲ ದಿನಗಳ ಹಿಂದೆ ಹಾಸನ ನಗರ ಬಡಾವಣೆ ಪೊಲೀಸ್ ಠಾಣೆಯಿಂದ ಮುಂಬಡ್ತಿ ಹೊಂದಿ ಗೊರೂರು ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದರು. ಇದಕ್ಕೂ ಮೊದಲು ಹಾಸನ ಜಿಲ್ಲೆಯ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಮತ್ತು ಅರಸೀಕೆರೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಮತ್ತೋರ್ವ ಮೃತ ಸಹಾಯಕರಾದ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಬಾಲಕೃಷ್ಣ ಹಾಸನದ ಗವೇನಹಳ್ಳಿಯವರು ಎಂದು ತಿಳಿದು ಬಂದಿದೆ. ಮಂಗಳವಾರ ಸಂಜೆ ಸುಮಾರು 6.30ರ ಸಮಯದಲ್ಲಿ ಕೊನೆ ಉಸಿರೆಳೆದಿದ್ದಾರೆ. ಹಾಸನ ಜಿಲ್ಲೆಯಲ್ಲಿ ಇದುವರೆಗೂ ಕೊರೊನಾದಿಂದ ಪೊಲೀಸರು ಯಾರು ಸಾವನಪ್ಪಿರಲಿಲ್ಲ.

Comments

Leave a Reply

Your email address will not be published. Required fields are marked *