ಹಾಸನದಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‍ಡೌನ್ : ಗೋಪಾಲಯ್ಯ

ಹಾಸನ: ಹಾಸನದಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‍ಡೌನ್ ಉಸ್ತುವಾರಿ ಸಚಿವ ಗೋಪಾಲಯ್ಯ ಘೋಷಣೆ ಮಾಡಿದ್ದಾರೆ.

ಪ್ರಧಾನಿ ಜೊತೆ ವೀಡಿಯೋ ಕಾನ್ಫರೆನ್ಸ್‍ನಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾರದಲ್ಲಿ ಮೂರು ದಿನ ಮಾತ್ರ ಬೆಳಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸ್ತು ಕೊಳ್ಳಲು ಅವಕಾಶ ಇರುತ್ತದೆ. ಸೋಮವಾರ, ಬುಧವಾರ, ಶುಕ್ರವಾರ ಬಿಟ್ಟು ಉಳಿದ ದಿನ ಸಂಪೂರ್ಣ ಲಾಕ್‍ಡೌನ್ ಇರುತ್ತದೆ ಎಂದು ಹೇಳಿದ್ದಾರೆ.

ಕೊರೊನಾ ಹೆಚ್ಚಾಗಿರುವುದರಿಂದ ಲಾಕ್‍ಡೌನ್ ಮಾಡುವುದದಾಗಿ ನಿರ್ಧರವನ್ನು ತೆಗೆದುಕೊಂಡಿದ್ದೇವೆ. ಜಿಲ್ಲೆಯ ಜನತೆ ಸಂಪೂರ್ಣ ಸಹಕಾರವನ್ನು ಕೊಡಬೇಕು ಎಂದು ಗೋಪಾಲಯ್ಯ ಅವರು ಮನವಿ ಮಾಡಿದ್ದಾರೆ.

ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆ ಬಳಿಕ ಮಾತನಾಡಿದ ಪ್ರಧಾನಿ, ಲಾಕ್‍ಡೌನ್ ನಿರ್ಧಾರವನ್ನು ಜಿಲ್ಲಾಡಳಿತದ ಹೆಗಲಿಗೆ ವಹಿಸಿದ್ದಾರೆ. ಜಿಲ್ಲೆಯ ಸ್ಥಿತಿಗೆ ತಕ್ಕಂತೆ ನಿರ್ಧಾರ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. ಜಿಲ್ಲಾಡಳಿತಕ್ಕೆ ಜಿಲ್ಲೆಯ ಪರಿಸ್ಥಿತಿ ಚೆನ್ನಾಗಿ ಗೊತ್ತಿರುತ್ತೆ. ಹೀಗಾಗಿ ಜಿಲ್ಲೆಗೆ ಅನುಗುಣವಾಗಿ ನೀವೇ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಮೋದಿ ತಿಳಿಸಿದ್ದಾರೆ. ಇದರ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಢಳಿತ ಲಾಕ್‍ಡೌನ್ ನಿರ್ಧಾರವನ್ನು ತೆಗೆದುಕೊಂಡಿದೆ.

Comments

Leave a Reply

Your email address will not be published. Required fields are marked *