ಹಾಸನ ನಗರದ ನಡು ರಸ್ತೆಯಲ್ಲೇ ಕಲ್ಲು ಎತ್ತಿಹಾಕಿ ಮಹಿಳೆಯ ಬರ್ಬರ ಕೊಲೆ

– ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಜನತೆ

ಹಾಸನ: ತಲೆ ಮೇಲೆ ಕಲ್ಲು ಎತ್ತಿಹಾಕಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ.

ಹಾಸನ ನಗರದ ಬಿಎಂ ರಸ್ತೆಯಲ್ಲಿ ಬರುವ ಎನ್‍ಆರ್ ವೃತ್ತದ ಸಮೀಪವಿರುವ ಶ್ರೀ ಕನ್ನಿಕಾ ಪರಮೇಶ್ವರಿ ಸಹಕಾರಿ ಬ್ಯಾಂಕ್ ಎದುರು ಕೊಲೆ ನಡೆದಿದೆ. ಕೊಲೆಯಾದ ಮಹಿಳೆಗೆ ಸುಮಾರು 45 ವರ್ಷ ವಯಸ್ಸಾಗಿದೆ. ತಡರಾತ್ರಿ ಯಾರೋ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಹಾಸನದ ಪ್ರಮುಖ ರಸ್ತೆಯಲ್ಲೇ ಕೊಲೆ ನಡೆದಿರುವುದು ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ಕೊಲೆ ನಡೆದಿರುವ ಜಾಗ ಹಗಲಿನ ವೇಳೆ ಯಾವಾಗಲೂ ಜನಜಂಗುಳಿಯಿಂದ ತುಂಬಿರುತ್ತದೆ. ರಾತ್ರಿ ಯಾರೂ ಇಲ್ಲದ ವೇಳೆ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹಾಸನ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Comments

Leave a Reply

Your email address will not be published. Required fields are marked *