ಹುಟ್ಟುಹಬ್ಬದ ಸಂಭ್ರಮದಲ್ಲಿ ಕೊಡಗಿನ ಬೆಡಗಿ

ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ 25 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕಾಮನ್ ಡಿಪಿ ಶೇರ್ ಮಾಡುವ ಮೂಲಕವಾಗಿ ಅಭಿಮಾನಿಗಳು ವಿಶ್ ಮಾಡುತ್ತಿದ್ದಾರೆ.

ಕನ್ನಡ, ತೆಲುಗು, ತಮಿಳು ಮತ್ತು ಹಿಂದೆ ಸಿನಿಮಾಗಳಲ್ಲಿ ತಮ್ಮದೆ ಆಗಿರುವ ನಟನಾ ಶೈಲಿಯ ಮೂಲಕವಾಗಿ ಹೆಸರು ಮಾಡಿರುವ ಕೊಡಗಿನ ಕುವರಿಗೆ ಆಪ್ತರು, ಸೆಲೆಬ್ರೆಟಿಗಳು, ಸ್ನೇಹಿತರು, ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ರಶ್ಮಿಕಾ ಮಂದಣ್ಣ ಕನ್ನಡದವರಾಗಿ ಕನ್ನಡಕ್ಕಿಂತಲೂ ಹೆಚ್ಚಾಗಿ ಪರಭಾಷೆ ಸಿನಿಮಾಗಳಲ್ಲಿಯೇ ಕಾಣಿಸಿಕೊಳ್ಳುತ್ತಾರೆ ಎನ್ನುವ ಬೇಸರ ಕನ್ನಡದ ಅಭಿಮಾನಿಗಳಿಗಿದೆ. ಈ ವಿಚಾರವಾಗಿ ರಶ್ಮಿಕಾ ಮಂದಣ್ಣ ಹೆಚ್ಚು ಸುದ್ದಿಯಲ್ಲಿ ಇರುತ್ತಾರೆ. ರಶ್ಮಿಕಾ ಅವರಿಗೆ ಅಭಿಮಾನಿಗಳ ಬಳಗ ದೊಡ್ಡಪ್ರಮಾಣದಲ್ಲಿಯೇ ಇದೆ. ರಶ್ಮಿಕಾ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಾಮನ್ ಡಿಪಿ ಬಿಡುಗಡೆ ಮಾಡಲಾಗಿದೆ. ಸಿನಿಮಾದ ಅನೇಕ ನಟ-ನಟಿಯರು ಮತ್ತು ನಿರ್ದೇಶಕರು ರಶ್ಮಿಕಾಗೆ ಶುಭಕೋರುತ್ತಿದ್ದಾರೆ.

ಅಭಿಮಾನಿಗಳಿಂದ ಸಹ ನೆಚ್ಚಿನ ನಾಯಕಿಗೆ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡುವ ಜೊತೆಗೆ ‘ನ್ಯಾಷನಲ್ ಕ್ರಶ್ ರಶ್ಮಿಕಾ’ ಎಂದು ಟ್ರೆಂಡ್ ಮಾಡುತ್ತಿದ್ದಾರೆ. ಎಲ್ಲಾ ಭಾಷೆಯ ಸಿನಿಮಾಗಳಲ್ಲಿ ಬೇಡಿಕೆ ನಟಿಯಾಗಿ ಗುರುತಿಸಿಕೊಂಡಿರುವ ನಟಿ ರಶ್ಮಿಕಾ ಸ್ಟಾರ್ ನಟರ ಜೊತೆ ತೆರೆಹಂಚಿಕೊಳ್ಳುತ್ತಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

Comments

Leave a Reply

Your email address will not be published. Required fields are marked *