ಹೈಕಮಾಂಡ್ ಗಮನಿಸುತ್ತಿದೆ, ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ: ಯತ್ನಾಳ್

ಬೆಂಗಳೂರು: ಯಾರ ಹೆಸರನ್ನೂ ಉಲ್ಲೇಖಿಸದೇ ವಂಶಾಡಳಿತ ಮತ್ತು ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿರುವ ಯತ್ನಾಳ್, ಪಕ್ಷದ ಹೈಕಮಾಂಡ್ ಎಲ್ಲ ಚಟುವಟಿಕೆಗಳನ್ನು ಗಮನಿಸುತ್ತಿದೆ. ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂದು ಹೇಳುವ ಮೂಲಕ ಹೆಸರನ್ನು ಹೇಳದೇ ತಮ್ಮದೇ ಪಕ್ಷದ ಕೆಲವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಪೋಸ್ಟ್ ನಲ್ಲಿ ಏನಿದೆ
ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ನಮ್ಮ ದೇಶದ ವಂಶಾಡಳಿತ ರಾಜಕೀಯ ವ್ಯವಸ್ಥೆ ಬಗ್ಗೆ ಹಾಗೂ ವಂಶಾಡಳಿತ ಭ್ರಷ್ಟಾಚಾರವನ್ನು ಬೇರು ಸಮೇತವಾಗಿ ಕಿತ್ತೊಗೆಯುವ ಘೋಷಣೆ ಮಾಡಿದ್ದು ರಾಷ್ಟ್ರದಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ರಾಷ್ಟ್ರವನ್ನು ಎರಡು ಬಾರಿ ಉದ್ದೇಶಿಸಿ ಮಾತನಾಡಿದ ಅವರು ವಂಶಾಡಳಿತ ಕುಟುಂಬಗಳ ನಡೆಸಿರುವ ವ್ಯಾಪಕ ಭ್ರಷ್ಟಾಚಾರ, ದುರಂಕಾರ, ಇಡಿ ಕುಟುಂಬ ಅಧಿಕಾರದ ಐಷಾರಾಮಿ ಜೀವನ ನಿಜಕ್ಕೂ ಹೇಸಿಗೆ ತರುವಂತಹುದು ಎಂದಿದ್ದಾರೆ.

ಪಕ್ಷಕ್ಕಾಗಿ ಪೂರ್ತಿ ಜೀವನ ಹಗಲು ರಾತ್ರಿ ಮನೆ ಮಠ ಬಿಟ್ಟು ದುಡಿದು ಕರ್ಮಟ ಕಾರ್ಯಕರ್ತರು ಯಾವುದೇ ಅಧಿಕಾರ ಅನುಭವಿಸದೆ ತಮ್ಮ ಜೀವನದ ಅಂತ್ಯದಲ್ಲಿ ಆರೋಗ್ಯ, ಆರ್ಥಿಕ ಮತ್ತು ವ್ಯಕ್ತಿಗತ ಹಾಳು ಮಾಡಿಕೊಂಡಿರುವ ಕಾರ್ಯಕರ್ತರಿಗೆ ಹೊಸ ಆಶಾಕಿರಣ ಮೂಡಿಸಿದೆ. ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ನಮ್ಮ ದೇಶದ ಎಲ್ಲ ಪಕ್ಷಗಳ ನಿಷ್ಠಾವಂತ ಕಾರ್ಯಕರ್ತರಿಗೆ ಹೊಸ ಆಶಾಕಿರಣ ಮೂಡಿಸಿದ್ದು, ನಾನು ಅವರಿಗೆ ಹೃದಯ ಪೂರ್ವಕ ಕೃತಜ್ಞತೆಗಳು ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಕೊನೆಯಲ್ಲಿ ಪಕ್ಷದ ಹೈಕಮಾಂಡ್ ಎಲ್ಲ ಚಟುವಟಿಕೆಗಳನ್ನು ಗಮನಿಸುತ್ತಿದೆ. ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂದು ಬರೆದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

Comments

Leave a Reply

Your email address will not be published. Required fields are marked *