ಭುವನೇಶ್ವರ: ಯುವಕನೊಬ್ಬ 11 ವರ್ಷದ ಅಪ್ರಾಪ್ತ ಹುಡುಗಿಯನ್ನ ಅತ್ಯಾಚಾರ ಮಾಡಿರುವ ಘಟನೆ ಒಡಿಶಾದ ಕೇಂದ್ರಪಾರಾ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಪಟ್ಟಮಂಡೈ ಬ್ಲಾಕ್ ನ ರಾಜ್ ನಗರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು 26 ವರ್ಷದ ಸೋಮನಾಥ ನಾಯಕ್ ಎಂದು ಗುರುತಿಸಲಾಗಿದೆ. ಸದ್ಯಕ್ಕೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

ಸಂತ್ರಸ್ತ ಹುಡುಗಿ ಫಿರಿಕಿದಾಂಡಿ ಗ್ರಾಮದಿಂದ ಸಮೀಪದ ಯೂತ್ಸ್ ಕ್ಲಬ್ ನಲ್ಲಿ ಟ್ಯೂಷನ್ ತರಗತಿಗೆಂದು ಹೋಗಿದ್ದಳು. ಆದರೆ ಅಂದು ತರಗತಿ ಕ್ಯಾನ್ಸಲ್ ಆಗಿದೆ. ಇದರಿಂದ ಇತರ ವಿದ್ಯಾರ್ಥಿಗಳು ಈ ಸ್ಥಳಕ್ಕೆ ಬಂದಿರಲಿಲ್ಲ. ಈ ವೇಳೆ ಸಂತ್ರಸ್ತೆ ಒಬ್ಬಳೆ ಇದ್ದುದ್ದನ್ನು ಗಮನಿಸಿದ ಆರೋಪಿ ನಾಯಕ್ ಸಂತ್ರಸ್ತೆಯನ್ನು ಕ್ಲಬ್ ನ ಹಿಂಬದಿಯಲ್ಲಿ ಹಾವು ತೋರಿಸುತ್ತೇನೆ ಎಂದು ನೆಪ ಹೇಳಿ ಕರೆದುಕೊಂಡು ಹೋಗಿದ್ದಾನೆ. ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಸಂತ್ರಸ್ತೆ ಮನೆಗೆ ಬಂದು ನಡೆದ ಘಟನೆಯ ಬಗ್ಗೆ ಪೋಷಕರಿಗೆ ತಿಳಿಸಿದ್ದಾಳೆ. ನಂತರ ಪೋಷಕರು ರಾಜ್ ನಗರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಂತ್ರಸ್ತೆಯ ಪೋಷಕರು ದೂರು ನೀಡಿದ ಬಳಿಕ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ಸಂತ್ರಸ್ತೆ ಮತ್ತು ಆರೋಪಿ ಇಬ್ಬರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಒಳಪಡಿಸಲಾಗಿದೆ. ಸದ್ಯಕ್ಕೆ ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply