ಒಂದೇ ದಿನದಲ್ಲಿ ಅತಿ ಹೆಚ್ಚು 1,074 ಮಂದಿ ಗುಣಮುಖ – 83 ಮಂದಿ ಕೊರೊನಾಗೆ ಬಲಿ

ನವದೆಹಲಿ: ದೇಶದಲ್ಲಿ ದಿನ ಕಳೆದಂತೆ ಕೊರೊನಾ ಮಹಾಮಾರಿಯ ಅಟ್ಟಹಾಸ ಮೇರೆ ಮೀರುತ್ತಿದೆ. ಕಳೆದ 24 ಗಂಟೆಗಳಲ್ಲಿ 2,573 ಹೊಸ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿದ್ದೂ, ಸೋಂಕಿತರ ಸಂಖ್ಯೆ 43,836ಕ್ಕೆ ಏರಿದೆ.

83 ಮಂದಿ ಮೃತ ಪಟ್ಟಿದ್ದು, ದೇಶದಲ್ಲಿ ಒಟ್ಟು 1,389 ಮಂದಿ ಮೃತಪಟ್ಟಿದ್ದಾರೆ. ದೇಶದ ಶೇ.52ರಷ್ಟು ಪ್ರಕರಣಗಳು ಕೇವಲ ಮಹಾರಾಷ್ಟ್ರ, ದೆಹಲಿ, ಗುಜರಾತ್‍ನಿಂದಲೇ ಬಂದಿವೆ.

ಕಳೆದ 24 ಗಂಟೆಯಲ್ಲಿ 1,074 ಮಂದಿ ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ನಿನ್ನೆ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.  ಪ್ರಸ್ತುತ ಭಾರತದಲ್ಲಿ 29,685 ಸಕ್ರಿಯ ಪ್ರಕರಣಗಳಿದ್ದು, 11,761 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ದೆಹಲಿ, ಮುಂಬೈನ ಜನತೆ ಲಾಕ್‍ಡೌನ್ ಸರಿಯಾಗಿ ಪಾಲಿಸದಿರುವುದರಿಂದ ಸೋಂಕು ಹೆಚ್ಚಲು ಕಾರಣವಾಯಿತು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅಭಿಪ್ರಾಯಪಟ್ಟಿದ್ದಾರೆ. ನಗರಗಳಿಗಿಂತ ಗ್ರಾಮೀಣ ಭಾಗದಲ್ಲಿಯೇ ಲಾಕ್‍ಡೌನ್ ನಿಯಮಗಳನ್ನು ಉತ್ತಮವಾಗಿ ಪಾಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಚೆನ್ನೈನಲ್ಲಿ ಐಪಿಎಸ್ ಅಧಿಕಾರಿಯೊಬ್ಬರಿಗೆ ಕೊರೊನಾ ಬಂದಿದೆ. ದೆಹಲಿಯಲ್ಲಿ ಬಿಎಸ್‍ಎಫ್ ಯೋಧರೊಬ್ಬರಿಗೆ ಸೋಂಕು ತಗುಲಿದ್ದು, ದೆಹಲಿಯ ಪ್ರಧಾನ ಕಚೇರಿಯ 2 ಅಂತಸ್ತುಗಳನ್ನು ಬಂದ್ ಮಾಡಲಾಗಿದೆ.

Comments

Leave a Reply

Your email address will not be published. Required fields are marked *