ಮುಂಬೈ: ಮಹಾರಾಷ್ಟ್ರದ 12 ಬಿಜೆಪಿ ಶಾಸಕರ ಅಮಾನತು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ವಿಧಾನಸಭೆಯಲ್ಲಿ ಅನುಚಿತ ವರ್ತನೆ ತೋರಿದ್ದಾರೆ ಎಂದು ಹೇಳಿ 12 ಬಿಜೆಪಿ ಶಾಸಕರನ್ನು ಸ್ಪೀಕರ್ 1 ವರ್ಷ ಅಮಾನತುಗೊಳಿಸಿದ್ದರು. ಈ ಸ್ಪೀಕರ್ ಆದೇಶವನ್ನು ನ್ಯಾ. ಎಎಂ ಖಾನ್ವಿಲ್ಕರ್, ನ್ಯಾ. ದಿನೇಶ್ ಮಹೇಶ್ವರಿ, ನ್ಯಾ. ಸಿಟಿ ರವಿಕುಮಾರ್ ಅವರಿದ್ದ ತ್ರಿಸದಸ್ಯ ಪೀಠ ರದ್ದುಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ಮಹಾರಾಷ್ಟ್ರದ 12 ಬಿಜೆಪಿ ಶಾಸಕರು ಒಂದು ವರ್ಷ ಅನರ್ಹ

ಅಧಿವೇಶನದ ನಂತರ ಶಾಸಕರನ್ನು ಅಮಾನತುಗೊಳಿಸುವಂತಿಲ್ಲ. ಇಂತಹ ನಿರ್ಣಯವು ಅಸಂವಿಧಾನಿಕ ಮತ್ತು ಕಾನೂನುಬಾಹಿರ. ಇದು ವಿಧಾನಸಭೆಯ ಅಧಿಕಾರವನ್ನು ಮೀರಿದ್ದು ಈ ನಿರ್ಧಾರ ದುರುದ್ದೇಶ ಪೂರಕವಾಗಿದೆ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಜ.19ರಂದು ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ಪೀಠ ಇಂದು ತೀರ್ಪು ಪ್ರಕಟಿಸಿದೆ.

ಮಹಾರಾಷ್ಟ್ರದ ವಿಧಾನಸಭಾ ಚಳಿಗಾಲದ ಅದಿವೇಶನದ ಸಂದರ್ಭ ಪ್ರಮುಖ ವಿಷಯ ಬಗ್ಗೆ ಚರ್ಚೆಯಾಗುತ್ತಿತ್ತು. ಈ ವೇಳೆ ನನ್ನನ್ನು 12 ಮಂದಿ ಬಿಜೆಪಿ ಶಾಸಕರು ನಿಂದಿಸಿದ್ದಾರೆ ಎಂದು ಕಾರಣ ತಿಳಿಸಿ 5 ಜುಲೈ 2021ರಲ್ಲಿ 12 ಮಂದಿ ಬಿಜೆಪಿ ಶಾಸಕರನ್ನು 1 ವರ್ಷ ಸ್ಪೀಕರ್ ಭಾಸ್ಕರ್ ಜಾದವ್‍ರನ್ನು ಅಮಾನತು ಮಾಡಿದ್ದರು. ಈ ಆದೇಶ ಪ್ರಶ್ನಿಸಿ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಸ್ಟೂಡೆಂಟ್ ಪೊಲೀಸ್ ಕೆಡೆಟ್‌ನಲ್ಲಿ ಹಿಜಬ್ ಧರಿಸಲು ಅವಕಾಶವಿಲ್ಲ: ಕೇರಳ ಸರ್ಕಾರ
𝐒𝐀𝐓𝐘𝐀𝐌𝐄𝐕𝐀 𝐉𝐀𝐘𝐀𝐓𝐄 !
We welcome & thank the Hon SC for the historic decision of quashing of suspension of our 12 @BJP4Maharashtra MLAs, who were fighting for the cause of OBCs in Maharashtra Legislative Assembly during the monsoon session. #12MLAs #Maharashtra #BJP https://t.co/10ZXurxtya— Devendra Fadnavis (@Dev_Fadnavis) January 28, 2022
ವಿಧಾನ ಸಭೆಯಲ್ಲಿ ಈ ಘಟನೆ ನಡೆದಾಗ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದ ಭಾಸ್ಕರ್ ಜಾದವ್, ಬಿಜೆಪಿಯ ಕೆಲ ಶಾಸಕರು ನನ್ನ ಕ್ಯಾಬಿನ್‍ಗೆ ಬಂದು ದೇವೇಂದ್ರ ಫಡ್ನವೀಸ್ ಮತ್ತು ಚಂದ್ರಕಾಂತ್ ಪಾಟೀಲ್ ಅವರ ಮುಂದೆ ನನ್ನನ್ನು ನಿಂದಿಸಿದ್ದಾರೆ ಎಂದು ದೂರಿದ್ದರು. ಇದನ್ನೂ ಓದಿ: ಆನ್‍ಲೈನ್ ಎಂಬ ತಾರತಮ್ಯದ ಕ್ಲಾಸ್ ಬೇಡ – ಹಿಜಬ್ ಹಾಕಿಯೇ ಕ್ಲಾಸಿಗೆ ಹೋಗುತ್ತೇವೆ
ಶಾಸಕರಾದ ಸಂಜಯ್ ಕುಟೆ, ಆಶಿಶ್ ಶೆಲಾರ್, ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಕಲ್ಕರ್, ಪರಾಗದ ಅಲವ್ನಿ, ಹರೀಶ್ ಪಿಂಪಾಲೆ, ರಾಮ್ ಸತ್ಪುಟೆ, ವಿಜಯ್ ಕುಮಾರ್ ರಾವಲ್, ಯೋಗೇಶ್ ಸಾಗರ್, ನಾರಾಯಣ್ ಕುಚೆ, ಕೀರ್ತಿಕುಮಾರ್ ಬಾಂಗ್ಡಿಯಾ ಅವರನ್ನು 1 ವರ್ಷ ಅವಧಿಗೆ ಅನರ್ಹಗೊಳಿಸಿದ್ದರು.

Leave a Reply