ರಾಜ್ಯದಲ್ಲಿ 122 ಕೇಸ್ – ಇಂದು ದಾಖಲಾಯಿತು ಏಕೈಕ ಮರಣ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 122 ಪಾಸಿಟಿವ್ ಕೇಸ್ ದಾಖಲಾಗಿದೆ. ಅಲ್ಲದೇ ಕೆಲದಿನಗಳಿಂದ ಶೂನ್ಯ ಮರಣ ಪ್ರಕರಣ ದಾಖಲಾಗುತ್ತಿತ್ತು. ಆದರೆ ಇಂದು ಏಕೈಕ ಮರಣ ಪ್ರಕರಣ ವರದಿಯಾಗಿದೆ.

ಬೆಂಗಳೂರು ನಗರದಲ್ಲಿ ಇಂದು 112 ಪಾಸಿಟಿವ್ ಕೇಸ್ ಮತ್ತು ಏಕೈಕ ಮರಣ ಪ್ರಕರಣ ದಾಖಲಾಗಿದೆ. ಇಂದು 162 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 0.58 ದಾಖಲಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,761ಕ್ಕೆ ತಲುಪಿದೆ. ಇಂದು ದಾಖಲಾದ ಏಕೈಕ ಮರಣ ಪ್ರಕರಣದೊಂದಿಗೆ ರಾಜ್ಯದಲ್ಲಿ ಈವರೆಗೆ ಒಟ್ಟು 40,064 ಮರಣ ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ತುಂಬುವ ಹಂತದಲ್ಲಿದೆ ಯಗಚಿ ಜಲಾಶಯ- ಸ್ಥಳೀಯರಲ್ಲಿ ಮನವಿ

ಈವರೆಗೆ ರಾಜ್ಯದಲ್ಲಿ ಒಟ್ಟು 39,50,004 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,08,137 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 88,371 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 20,888 ಸ್ಯಾಂಪಲ್ (ಆರ್‌ಟಿಪಿಸಿಆರ್ 15,508 + 5,380 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಸಿಎಂ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ರೈತರು ಪೊಲೀಸರ ವಶಕ್ಕೆ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 112, ದಕ್ಷಿಣ ಕನ್ನಡ 5, ಹಾಸನ 2, ಚಿತ್ರದುರ್ಗ, ಧಾರವಾಡ ಮತ್ತು ರಾಯಚೂರಿನಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 122 ಪ್ರಕರಣ ವರದಿಯಾಗಿದೆ.

Comments

Leave a Reply

Your email address will not be published. Required fields are marked *