14ನೇ ಅವೃತ್ತಿಯ ಐಪಿಎಲ್ ಪಂದ್ಯಗಳು ಮುಂದೂಡಿಕೆ

ಮುಂಬೈ: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಗಳನ್ನು ಮುಂದೂಡಿಕೆ ಮಾಡಲಾಗಿದೆ.

ದೇಶದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಜೊತೆಗೆ  ಆಟಗಾರರು ಸೇರಿದಂತೆ  7  ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ನಿನ್ನೆ ನಡೆಯಬೇಕಾಗಿದ್ದ ಆರ್‍ಸಿಬಿ ನಡುವಿನ ಪಂದ್ಯವನ್ನು ರದ್ದು ಮಾಡಲಾಗಿತ್ತು. ಕೋಲ್ಕತ್ತಾದ ಇಬ್ಬರು ಆಟಗಾರರಿಲ್ಲಿ ಕೊರೊನಾ ಸೋಂಕು ಕಂಡು ಬಂದಿತ್ತು.

Comments

Leave a Reply

Your email address will not be published. Required fields are marked *