ದುನಿಯಾ ವಿಜಿಗೆ 14 ದಿನ ಜೈಲೂಟ ಫಿಕ್ಸ್

ಬೆಂಗಳೂರು: ನಟ ದುನಿಯಾ ವಿಜಯ್ ಆ್ಯಂಡ್ ಗ್ಯಾಂಗ್‍ನ ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶಿಸಿದ್ದಾರೆ.

ಜಿಮ್ ಟ್ರೈನರ್ ಮಾರುತಿ ಗೌಡ ಎಂಬವರನ್ನು ಅಪಹರಿಸಿ, ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ನಟ ದುನಿಯಾ ವಿಜಯ್ ಜೈಲುಪಾಲಾಗಿದ್ದಾರೆ. ಶನಿವಾರ ರಾತ್ರಿ ಅರೆಸ್ಟ್ ಆಗಿದ್ದ ದುನಿಯಾ ವಿಜಿಯನ್ನ ದಿನವಿಡಿ ವೈಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ಇರಿಸಿದರು. ರಾತ್ರಿ 7.30ಕ್ಕೆ ಜಡ್ಜ್ ನಿವಾಸದಲ್ಲಿ ದುನಿಯಾ ವಿಜಯ್ ಆ್ಯಂಡ್ ಟೀಮ್ ಪೊಲೀಸರು ಹಾಜರುಪಡಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ದುನಿಯಾ ವಿಜಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶ ನೀಡಿದರು. ಇದೀಗ ಪೊಲೀಸರು ದುನಿಯಾ ವಿಜಿಯನ್ನು ಪರಪ್ಪನ ಅಗ್ರಹಾರ ಜೈಲಿನತ್ತ ಕರೆದೊಯ್ಯುತ್ತಿದ್ದಾರೆ. ಕೆಲವೇ ಕ್ಷಣಗಳಲ್ಲಿ ದುನಿಯಾ ವಿಜಿಯಿರೋ ಪೊಲೀಸ್ ವಾಹನ ಜೈಲು ತಲುಪಲಿದೆ.

ಶನಿವಾರ ರಾತ್ರ ಮಾರುತಿಗೌಡ ಎಂಬವರನ್ನು ದುನಿಯಾ ವಿಜಯ್ ಅಪಹರಿಸಿದ್ದರು. ಮಾರುತಿ ಗೌಡ ಸಹಚರರಿಂದ ದೂರು ಪಡೆದ ಹೈಗ್ರೌಂಡ್ ಪೊಲೀಸರು ಮೊದಲಿಗೆ ದುನಿಯಾ ವಿಜಯ್‍ಗೆ ಕರೆ ಮಾಡಿ ಎಚ್ಚರಿಸಿದ್ದರು. 30 ನಿಮಿಷದ ನಂತರ ಕಿಡ್ನಾಪ್ ಮಾಡಿದ್ದ ಮಾರುತಿಗೌಡನೊಂದಿಗೆ ದುನಿಯಾ ವಿಜಯ್ ಹೈಗ್ರೌಂಡ್ ಪೊಲೀಸ್ ಠಾಣೆ ಬಳಿ ತನ್ನ ರೇಂಜ್ ರೋವರ್ ಕಾರಿನಲ್ಲಿ ಪ್ರತ್ಯಕ್ಷರಾದರು. ಹಲ್ಲೆ ಮಾಡಿದ್ದ ಜಿಮ್ ಟ್ರೇನರ್ ಮಾರುತಿಗೌಡನ್ನ ಕರೆದುಕೊಂಡು ಬಂದಿದ್ದರು. ಆದರೆ ದುನಿಯಾ ವಿಜಯ್ ಪೊಲೀಸ್ ಠಾಣೆಯೂ ಬಳಿಯೂ ದರ್ಪ ತೋರಿದ್ದು, ಅವಾಚ್ಯ ಶಬ್ಧಗಳಿಂದ ಮತ್ತೆ ಪಾನಿಪುರಿ ಕಿಟ್ಟಿ ಹಾಗೂ ಹುಡುಗರನ್ನ ಬೈದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

Comments

Leave a Reply

Your email address will not be published. Required fields are marked *