ಬೆಂಗಳೂರು: ರಸ್ತೆ ಬದಿಯ ಫುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ ಕಂಟೇನರ್ ಲಾರಿ ಹರಿದು, 14 ವರ್ಷದ ಬಾಲಕ ಸ್ಥಳದಲ್ಲೇ ಸಾವನಪ್ಪಿರುವ ಧಾರುಣ ಘಟನೆ ನೆ ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 4ರ ತುಮಕೂರು ಬೆಂಗಳೂರು ರಸ್ತೆಯ ಜಾಸ್ ಟೋಲ್ ಬಳಿ ಈ ಅಪಘಾತ ಸಂಭವಿಸಿದ್ದು, 14 ವರ್ಷದ ಯುವಕ ಬಾಲಕ ಜೋತು ಚೌಹಾನ್ ಮೃತ ದುರ್ದೈವಿ. ಈ ಅಪಘಾತದಲ್ಲಿ ಮತ್ತೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಇನ್ನುಳಿದ 13 ಮಂದಿ ಪವಾಡ ರೀತಿಯಲ್ಲಿ ಅದೃಷ್ಟವಶಾತ್ ಪಾರಾಗಿದ್ದಾರೆ.

ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ 15 ಮಂದಿ ರಸ್ತೆ ಬದಿಯ ಫುಟ್ ಫಾತ್ ಬಳಿ ರಾತ್ರಿ ಮಲಗಿದ್ದರು. ಈ ವೇಳೆ ಕಂಟೇನರ್ ಲಾರಿ ವೇಗವಾಗಿ ಬಂದು ಮಲಗಿದ್ದವರ ಮೇಲೆ ಹರಿದಿದೆ. ಪರಿಣಾಮ 14 ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. 45 ವರ್ಷದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತವಾದ ತಕ್ಷಣ ಲಾರಿ ಹಾಗೂ ಚಾಲಕ ಪರಾರಿಯಾಗಿದ್ದಾರೆ. ಸದ್ಯಕ್ಕೆ ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply