ಕೊಪ್ಪಳ: ಬೆಳ್ಳಂಬೆಳಗ್ಗೆ ಗೂಡಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಬಳಿಕ 16 ಅಂಗಡಿಗಳು ಹೊತ್ತಿ ಉರಿದು ಸುಟ್ಟು ಭಸ್ಮವಾಗಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಕಾರಟಗಿಯಲ್ಲಿ ಈ ಘಟನೆ ನಡೆದಿದ್ದು, ಆಕಸ್ಮಿಕ ಬೆಂಕಿಗೆ ಹೋಟೆಲ್‍ನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮತ್ತಷ್ಟು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಅಂಗಡಿಯಲ್ಲಿದ್ದ ವಸ್ತುಗಳು ಭಸ್ಮವಾಗಿದ್ದು, ಅಪಾರ ಹಾನಿ ಸಂಭವಿಸಿದೆ.

ಬೆಂಕಿಯ ಕೆನ್ನಾಲಿಗೆ ಹರಡಿ ಕಟ್ಟಿಂಗ್ ಶಾಪ್, ವೆಲ್ಡಿಂಗ್ ಶಾಪ್ ಸೇರಿದಂತೆ ನಾನಾ ಅಂಗಡಿಗಳು ಸುಟ್ಟುಹೋಗಿವೆ. ಅಗ್ನಿಶಾಮಕದಳ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಈ ಸಂಬಂಧ ಶಾಸಕ ಶಿವರಾಜ್ ತಂಗಡಗಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಇದೊಂದು ದೊಡ್ಡ ಅನಾಹುತ. ದೇವರ ಅನುಗೃಹದಿಂದ ಪ್ರಾಣಹಾನಿ ಸಂಭವಿಸಿಲ್ಲ. ಒಟ್ಟು 16 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಎಲ್ಲವೂ ಬಡವರ ಅಂಗಡಿಗಳೇ ಆಗಿವೆ. ಈ ಸಂಬಂಧ ನಾನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರದ ವ್ಯವಸ್ಥೆಯನ್ನ ಮಾಡುತ್ತೇನೆ ಅಂತ ಭರವಸೆ ನೀಡಿದ್ರು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.youtube.com/watch?v=RfQc9pXwCbI










Leave a Reply