ದುಷ್ಕರ್ಮಿಗಳಿಂದ ಪ್ರಿಯಕರನ ಹತ್ಯೆ – ಮನನೊಂದು ಆತ್ಮಹತ್ಯೆಗೆ ಶರಣಾದ ಯುವತಿ

ಲಕ್ನೋ: ದುಷ್ಕರ್ಮಿಗಳು ತನ್ನ ಪ್ರಿಯಕರನನ್ನು ಹತ್ಯೆ ಮಾಡಿದ್ದಕ್ಕೆ ಮನನೊಂದು ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಚಿಲ್ಕಾನಾದಲ್ಲಿ ನಡೆದಿದೆ.

ಚಿಲ್ಕಾನಾ ಪ್ರದೇಶದ ನಿವಾಸಿ ಅಂಕಿತಾ (18) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ತಿಳಿದು ಬಂದಿದೆ. ಶುಕ್ರವಾರ ಆಕೆಯ ಪ್ರಿಯಕರನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಇದರಿಂದ ನೊಂದಿದ್ದ ಯುವತಿ ಶನಿವಾರ (ಸೆ.20) ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಅಪಮಾನ – ಮಹಿಳೆ ಪೊಲೀಸರ ವಶಕ್ಕೆ

ಯುವತಿಯ ಪ್ರಿಯಕರ ಮಹಿಲ್‌ (22) ಕೊಲೆಯಲ್ಲಿ ಅಂಕಿತಾ ಅವರ ಸಂಬಂಧಿಕರು ಭಾಗಿಯಾಗಿದ್ದಾರೆಂದು ಆರೋಪಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆತನ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಈ ಸಂಬಂಧ ಅಂಕಿತಾಳ ಇಬ್ಬರು ಅಪ್ರಾಪ್ತ ಸಹೋದರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗಣೇಶ ವಿಗ್ರಹಕ್ಕೆ ಅಪಮಾನ – ಕಿಡಿಗೇಡಿ ಮಹಿಳೆಗಾಗಿ ಚಿಕ್ಕಮಗಳೂರಲ್ಲಿ ಹುಡುಕಾಟ