ಜೈಸಲ್ಮೇರ್-ಜೋಧಪುರ ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್ – 19 ಪ್ರಯಾಣಿಕರು ಸಜೀವ ದಹನ

ಜೈಪುರ: ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ (Bus) ಬೆಂಕಿ ಕಾಣಿಸಿಕೊಂಡ ಪರಿಣಾಮ 19 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಜೈಸಲ್ಮೇರ್-ಜೋಧಪುರ ಹೆದ್ದಾರಿಯಲ್ಲಿ (Jaisalmer–Jodhpur Highway) ನಡೆದಿದೆ.

ಒಟ್ಟು 57 ಮಂದಿ ಪ್ರಯಾಣಿಕರನ್ನು ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಬಸ್ ಅನ್ನು ರಸ್ತೆಬದಿಯಲ್ಲಿ ನಿಲ್ಲಿಸಿದ್ದಾನೆ. ಅಷ್ಟುಹೊತ್ತಿಗಾಗಲೇ ಬೆಂಕಿ ಸಂಪೂರ್ಣ ಬಸ್ ಅನ್ನು ಆವರಿಸಿಕೊಂಡಿದ್ದು, 19 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಟ್ರಂಪ್‌ಗೆ ಗೂಗಲ್‌ ಟಕ್ಕರ್‌| ವಿಶಾಖಪಟ್ಟಣದಲ್ಲಿ ಎಐ-ಹಬ್‌ಗಾಗಿ 1500 ಕೋಟಿ ಡಾಲರ್‌ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ

ಘಟನೆ ನಡೆದ ತಕ್ಷಣವೇ ಸ್ಥಳೀಯರು ಮತ್ತು ದಾರಿಹೋಕರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಅಲ್ಲದೇ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಯಿತು. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಜೈಸಲ್ಮೇರ್‌ನ ಜವಾಹರ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: Udupi | ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಜೈಸಲ್ಮೇರ್ ಜಿಲ್ಲಾಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಪ್ರಾರಂಭಿಸಿದೆ. ಇದನ್ನೂ ಓದಿ: ಬಿಹಾರ ಚುನಾವಣೆಗೆ 71 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ – ಸ್ಪೀಕರ್‌ಗೆ ಕೊಟ್ಟಿಲ್ಲ ಟಿಕೆಟ್

ಗಾಯಾಳುಗಳಿಗೆ ತಕ್ಷಣ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಪ್ರತಾಪ್ ಸಿಂಗ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೇ ಸಹಾಯವಾಣಿ ಸಂಖ್ಯೆಗಳನ್ನು ಸಹ ನೀಡಲಾಗಿದೆ. ಮಾಹಿತಿ ತಿಳಿದ ತಕ್ಷಣ ಸಿಎಂ ಭಜನ್‌ಲಾಲ್ ಶರ್ಮಾ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಇದನ್ನೂ ಓದಿ: ಅ.22 ರಂದು ಶಬರಿಮಲೆಗೆ ದ್ರೌಪದಿ ಮುರ್ಮು ಭೇಟಿ

ರಾಜ್ಯಪಾಲ ಹರಿಭಾವು ಬಗಾಡೆ, ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಬಿಜೆಪಿ ರಾಜ್ಯಾಧ್ಯಕ್ಷ ಮದನ್ ರಾಥೋಡ್ ಮತ್ತು ಇತರ ನಾಯಕರು ಘಟನೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜಮೀನಿಗೆ ತೆಂಗಿನಕಾಯಿ ಕೀಳಲು ಹೋಗಿದ್ದಾಗ ಅವಘಡ – ಅಕ್ರಮ ವಿದ್ಯುತ್ ಪ್ರವಹಿಸಿ ಇಬ್ಬರು ಸಾವು