2.0 ಸಿನಿಮಾದ ರಜಿನಿ ಪಾತ್ರದ ಆಫರ್ ಮೊದ್ಲು ನನಗೆ ಬಂದಿತ್ತು: ಅಮೀರ್ ಖಾನ್

ಮುಂಬೈ: 2.0 ಸಿನಿಮಾದಲ್ಲಿ ರಜಿನಿಕಾಂತ್ ಅಭಿನಯಿಸುತ್ತಿರುವ ಪಾತ್ರದ ಆಫರ್ ನನಗೆ ಬಂದಿತ್ತು. ಆದರೆ ನಾನು ಆ ಪಾತ್ರಕ್ಕೆ ತಕ್ಕ ನಟನಲ್ಲ ಎಂದು ತಿರಸ್ಕರಿಸಿದೆ ಎಂದು ನಟ ಅಮೀರ್ ಖಾನ್ ಖಾಸಗಿ ಚಾನಲ್‍ನ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

2.0 ಚಿತ್ರದ ನಿರ್ದೇಶಕ ಶಂಕರ್ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಲು ಆಹ್ವಾನಿಸಿದ್ದರು. ನಾನು ಶಂಕರ್ ಮತ್ತು ರಜಿನಿಕಾಂತ್ ಅವರ ದೊಡ್ಡ ಅಭಿಮಾನಿ. 2.0 ಸಿನಿಮಾದಲ್ಲಿ ರಜಿನಿಕಾಂತ್ ಅವರ ಪಾತ್ರ ಮಾಡುವಂತೆ ಆಫರ್ ಮಾಡಿದ್ರು. ರಜನೀಕಾಂತ್ ಅವರು ಕೂಡ ಆ ಪಾತ್ರ ಮಾಡುವಂತೆ ಹೇಳಿದ್ದರು. ಸಿನಿಮಾದ ಸ್ಕ್ರಿಪ್ಟ್ ಅದ್ಭುತವಾಗಿತ್ತು, ಸ್ಕ್ರಿಫ್ಟ್ ನೋಡಿ ನನ್ನ ಕಣ್ಣು ಮುಚ್ಚಿ ನನ್ನನ್ನು ನಾನು ಆ ಪಾತ್ರದಲ್ಲಿ ಕಲ್ಪನೆ ಮಾಡಿಕೊಳ್ಳಲು ಪ್ರಯತ್ನಿಸಿದೆ. ಆದರೆ ನನಗೆ ಆ ಪಾತ್ರದಲ್ಲಿ ರಜಿನಿ ಅವರೇ ಕಾಣಿಸತೊಡಗಿದರು. ನಂತರ ಶಂಕರ್‍ಜೀಗೆ ಹೇಳಿದೆ ಈ ಪಾತ್ರವನ್ನು ರಜಿನಿಕಾಂತ್ ಅವರಿಂದ ಮಾತ್ರ ಮಾಡಲು ಸಾಧ್ಯ. ನನ್ನಿಂದ ಆ ಪಾತ್ರಕ್ಕೆ ನ್ಯಾಯ ಒದಗಿಸಿಕೊಡಲು ಆಗಲ್ಲ ಎಂದು ತಿರಸ್ಕರಿಸಿದೆ ಅಂತಾ ಆಮಿರ್ ಹೇಳಿದ್ದಾರೆ.

ರೋಬೋ ಚಿತ್ರದ ಮುಂದುವರಿದ ಭಾಗವಾದ 2.0 ಎಸ್. ಶಂಕರ್ ನಿರ್ದೇಶನದ ಬಹುನಿರೀಕ್ಷಿತ ಚಿತ್ರ. ಈಗಾಗಲೇ ಸಿನಿಮಾದ ಟೀಸರ್, ಫಸ್ಟ್ ಲುಕ್ ಮತ್ತು ಮೇಕಿಂಗ್ ವಿಡಿಯೋ ಗಳಿಂದ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. 2.0 ಸಿನಿಮಾದಲ್ಲಿ ರಜನಿಕಾಂತ್, ಅಕ್ಷಯ್ ಕುಮಾರ್ ಮತ್ತು ಆ್ಯಮಿ ಜಾಕ್ಸನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಎಸ್.ಶಂಕರ್ ಆ್ಯಕ್ಷನ್ ಕಟ್ ಹೇಳಿದ್ದು, ಎ.ಆರ್.ರೆಹಮಾನ್ ಸಂಗೀತದಲ್ಲಿ ಹಾಡುಗಳು ಮೂಡಿ ಬಂದಿವೆ. ಸಿನಿಮಾ ತೆಲಗು ಮತ್ತು ಹಿಂದಿಯಲ್ಲಿ ಮೂಡಿಬರಲಿದೆ. 2.0 ಸಿನಿಮಾ 2018ರ ಜನವರಿಯಲ್ಲಿ ಬಿಡುಗಡೆಗೊಳ್ಳುವ ನಿರೀಕ್ಷೆಯಲ್ಲಿದೆ.

2010ರಲ್ಲಿ ರೋಬೋ ಸಿನಿಮಾ ತೆರೆ ಕಂಡಿತ್ತು. ರಜನಿ ಮತ್ತು ಐಶ್ವರ್ಯ ರೈ ನಟಿಸಿದ್ದ ಸಿನಿಮಾ ಕೋಟಿ ಕೋಟಿ ಹಣವನ್ನು ಗಳಿಸಿತ್ತು.

Comments

Leave a Reply

Your email address will not be published. Required fields are marked *