ಸುಮಲತಾ ಗೆಲುವಿನ ಬೆನ್ನಲ್ಲೇ ಮಂಡ್ಯದಲ್ಲಿ ಕಾರ್ಯಕರ್ತರ ವಾರ್- ಇಬ್ಬರು ಆಸ್ಪತ್ರೆಗೆ ದಾಖಲು

ಮಂಡ್ಯ: ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಗೆಲುವಿನ ಬೆನ್ನಲ್ಲೇ ಮಂಡ್ಯದಲ್ಲಿ ಕಾರ್ಯಕರ್ತರ ನಡುವೆ ವಾರ್ ಶುರುವಾಗಿದೆ.

ಮದ್ದೂರು ತಾಲೂಕಿನ ಕೂಳಗೆರೆ ಗೇಟ್ ಬಳಿ ಸುಮಲತಾ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಗಿದೆ. ಸುಮಲತಾ ಗೆಲುವಿನ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ಈ ಗಲಾಟೆ ನಡೆದಿದೆ ಎನ್ನಲಾಗಿದೆ.

ಕಾರ್ಯಕರ್ತರು ಬಿಯರ್ ಬಾಟಲಿ ಹಾಗೂ ಚಾಕುವಿನಿಂದ ಬಡಿದಾಡಿಕೊಂಡಿದ್ದಾರೆ. ಈ ಗಲಾಟೆಯಲ್ಲಿ ಸುಮಲತಾ ಬೆಂಬಲಿಗರಾದ ಶಶಿಧರ್ ಮತ್ತು ಕುಮಾರ್‍ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದಲ್ಲಿ ನಡೆದ ಸ್ವಾಭಿಮಾನಿ ವರ್ಸಸ್ ಸರ್ಕಾರದ ನಡುವಿನ ಸಮರದಲ್ಲಿ ಸುಮಲತಾ ಅವರು ಭರ್ಜರಿ ಗೆಲುವು ಪಡೆದಿದ್ದಾರೆ. ಚುನಾವಣೆಯಲ್ಲಿ ನಿಖಿಲ್ ಅವರಿಗೆ 5,71,777 ಮತ ಲಭಿಸಿದ್ದರೆ, ಸುಮಲತಾ ಅವರಿಗೆ 6,98,213 ಮತ ಲಭಿಸಿದೆ. ಆ ಮೂಲಕ ಸುಮಲತಾ ಅವರು ಬರೋಬ್ಬರಿ 1,26,436 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ.

Comments

Leave a Reply

Your email address will not be published. Required fields are marked *