ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಸಹೋದರಿಯರು

ಜೈಪುರ್: ಕಿಡಿಗೇಡಿಗಳ ಕಿರುಕುಳದಿಂದ ಬೇಸತ್ತು ಇಬ್ಬರು ಅಪ್ರಾಪ್ತ ಸಹೋದರಿಯರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ (Rajasthan) ಪ್ರತಾಪಗಡದಲ್ಲಿ ನಡೆದಿದೆ.

ಬಾಲಕಿಯರು ಹಾಸ್ಟೆಲ್‍ನಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದರು. ಇವರಿಗೆ ಅಪ್ರಾಪ್ತ ಸೇರಿದಂತೆ ಮೂವರು ಯುವಕರು ಕಿರುಕುಳ ನೀಡಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ

ಬಾಲಕಿಯರು ವಿಷ ಸೇವಿಸಿದ ವಿಚಾರ ತಿಳಿದ ಬಳಿಕ ಅವರನ್ನು ಅಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ವೈದ್ಯರು ಈ ವೇಳೆ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಬಳಿಕ ಬಾಲಕಿಯರ ತಂದೆ ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಚಾರವಾಗಿ ರಾಜಸ್ಥಾನದ ಬಿಜೆಪಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್, ಅಶೋಕ್ ಗೆಹ್ಲೋಟ್ ಅವರ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ಘಟನೆಯು ರಾಜ್ಯದ ಕಳಪೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಸೂಚಿಸುತ್ತದೆ ಎಂದು ಹೇಳಿಕೊಂಡಿದ್ದಾರೆ.

ಅಲ್ಲದೇ ಅವರು ‘ಎಕ್ಸ್’ ಖಾತೆಯಲ್ಲಿ ಕಾಂಗ್ರೆಸ್‍ನ ಜಂಗಲ್ ರಾಜ್‍ನಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳು ಉತ್ತುಂಗದಲ್ಲಿದೆ. ಈ ಘಟನೆ ನಾಚಿಕೆಗೇಡಿನ ಸಂಗತಿಯಾಗಿದೆ. ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದೆಹಲಿ ಐಐಟಿ ವಾಶ್ ರೂಂನಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ – ಸ್ವಚ್ಛತಾ ಸಿಬ್ಬಂದಿ ಬಂಧನ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]