ಇಬ್ಬರು ಮಹಿಳೆಯರ ಹೊಟ್ಟೆಯಲ್ಲಿತ್ತು 28 ಕೋಟಿ ಮೌಲ್ಯದ ಕೊಕೇನ್ – ಬೆಚ್ಚಿಬಿದ್ದ ಪೊಲೀಸರು

Cocaine

ನವದೆಹಲಿ: ತಮಿಳಿನ ಖ್ಯಾತ ನಟ ಸೂರ್ಯ ಅಭಿನಯದ ಅಯನ್ ಸಿನಿಮಾದಲ್ಲಿರುವ ದೃಶ್ಯದಂತೆ ತಮ್ಮ ಹೊಟ್ಟೆಯೊಳಗೆ ಸುಮಾರು 28 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಅನ್ನು ಸಾಗಿಸುತ್ತಿದ್ದ ಇಬ್ಬರು ಚಾಲಾಕಿ ಮಹಿಳೆಯರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಉಗಾಂಡಾದಿಂದ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರ ಹೊಟ್ಟೆಯಲ್ಲಿ 181 ಕ್ಯಾಪ್ಸುಲ್‌ಗಳಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದ 28 ಕೋಟಿ ಮೌಲ್ಯದ ಕೊಕೇನ್ ಪತ್ತೆಯಾಗಿದ್ದು, ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ಬೆಂಗ್ಳೂರು ಡ್ರೋನ್ ಹಾರಿಸಿ ಉತ್ಸವಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

ಇಬ್ಬರು ಮಹಿಳೆಯರು ಸುಮಾರು 2 ಕೆಜಿ ಕೊಕೇನ್ ಅನ್ನು ಮಾತ್ರೆಗಳಲ್ಲಿ ಅಡಗಿಸಿಟ್ಟು ನುಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಕಿಂಗ್‍ಪಿನ್ ಅರೆಸ್ಟ್

ಒಬ್ಬ ಮಹಿಳೆ ನಿನ್ನೆ ಸಿಕ್ಕಿಬಿದ್ದಿದ್ದರು. ಈಕೆ ತನ್ನ ಹೊಟ್ಟೆಯೊಳಗೆ 81 ಮಾತ್ರೆಗಳನ್ನು ತುಂಬಿಕೊಂಡಿದ್ದರು. ಆಕೆಯನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಸುಮಾರು 891 ಗ್ರಾಂ ತೂಕದ ತೂಕದ ಕೊಕೇನ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 13.6 ಕೋಟಿಗಳಷ್ಟಿದೆ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಮೇ 22 ರಂದು ಬಂಧಿತ ಮಹಿಳೆಯ ಹೊಟ್ಟೆಯಲ್ಲಿ ಸುಮಾರು 80 ಕ್ಯಾಪ್ಸುಲ್‌ಗಳು ಬಚ್ಚಿಟ್ಟಿರುವುದು ಪತ್ತೆಯಾಗಿತ್ತು. ಆಕೆಯನ್ನು ಇದೇ ಆಸ್ಪತ್ರೆಗೆ ದಾಖಲಿಸಿ 0.957 ಕೆಜಿ ತೂಕದ ಕೊಕೇನ್ ಇರುವುದನ್ನು ಪತ್ತೆ ಹಚ್ಚಿ ಅದನ್ನು ವಶಪಡಿಸಿಕೊಳ್ಳಲಾಗಿತ್ತು. ಇದರ ಮೌಲ್ಯ 14 ಕೋಟಿಗಳಷ್ಟಿತ್ತು ಎಂದು ಅಂದಾಜಿಸಿದ್ದರು.

Comments

Leave a Reply

Your email address will not be published. Required fields are marked *